ADVERTISEMENT

ಡಿ.6ಕ್ಕೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2021, 20:15 IST
Last Updated 24 ನವೆಂಬರ್ 2021, 20:15 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ಬೆಂಗಳೂರು: ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್‌ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಿಸೆಂಬರ್‌ 6 ರಂದು ಉದ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಸಂಜೆ ವಿವಿಧ ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿದರು.

ಪ್ರಧಾನ ಮಂತ್ರಿಯವರು ಡಿ.6 ಕ್ಕೆ ಉದ್ಘಾಟನೆಗೆ ಬರಲು ಒಪ್ಪಿಕೊಂಡಿರುವುದರಿಂದ ಅದಕ್ಕಾಗಿ ನಡೆಸಿರುವ ತಯಾರಿಯ ಬಗ್ಗೆ ಬೊಮ್ಮಾಯಿ ವಿವರ ಪಡೆದರು. ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ವಸತಿ ಸಚಿವ ವಿ.ಸೋಮಣ್ಣ, ತೋಟಗಾರಿಕೆ ಸಚಿವ ಮುನಿರತ್ನ, ಅಧಿಕಾರಿಗಳಾದ ಕುಮಾರ್ ನಾಯಕ್, ಗೌರವ್‌ ಗುಪ್ತ, ಸೆಲ್ವಕುಮಾರ್, ಪಿ.ಪ್ರದೀಪ್, ವಿಶ್ವವಿದ್ಯಾಲಯದ ಕುಲಪತಿ ಡಾ.ಭಾನುಮೂರ್ತಿಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.