ADVERTISEMENT

ಡಿವಿ ಸದಾನಂದ ಗೌಡ ಅವರಿಗೆ ಜನ್ಮದಿನದ ಶುಭಾಶಯ ಕೋರಿದ ಪ್ರಧಾನಿ ಮೋದಿ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2021, 6:00 IST
Last Updated 18 ಮಾರ್ಚ್ 2021, 6:00 IST
   

ನವದೆಹಲಿ:ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನ್ಮದಿನದ ಶುಭಾಶಯ ಕೋರಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಪ್ರಧಾನಿ, ಬಿಜೆಪಿಯನ್ನು ತಳಮಟ್ಟದಿಂದ ಬಲಪಡಿಸುವಲ್ಲಿ ಸದಾನಂದಗೌಡ ಪ್ರಮುಖ ಪಾತ್ರವಹಿಸಿದ್ದಾರೆ ಎಂದೂ ಶ್ಲಾಘಿಸಿದ್ದಾರೆ.

ʼಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ಅನುಭವಿ ನಾಯಕರಾಗಿರುವ ಅವರು ನಮ್ಮ ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲು ಶ್ರಮಿಸಿದ್ದಾರೆ. ರಾಸಾಯನಿಕ ಮತ್ತು ರಸಗೊಬ್ಬರ ಕ್ಷೇತ್ರದ ಅಭಿವೃದ್ಧಿಯನ್ನು ಖಚಿತಪಡಿಸುವ ಸಲುವಾಗಿ ಅವರು ಮುಂಚೂಣಿಯಲ್ಲಿ ನಿಂತಿದ್ದಾರೆ. ಅವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆʼ ಎಂದು ಬರೆದುಕೊಂಡಿದ್ದಾರೆ.

ADVERTISEMENT

ಲೋಕಸಭೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾಕ್ಷೇತ್ರವನ್ನು ಪ್ರತಿನಿಧಿಸುವ ಸದಾನಂದಗೌಡ, ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.