ADVERTISEMENT

ಬೊಮ್ಮಾಯಿಯನ್ನು ಅಭಿನಂದಿಸಿ ಯಡಿಯೂರಪ್ಪರನ್ನು ಕೊಂಡಾಡಿದ ಪ್ರಧಾನಿ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಜುಲೈ 2021, 8:43 IST
Last Updated 28 ಜುಲೈ 2021, 8:43 IST
ಬಿ.ಎಸ್.ಯಡಿಯೂರಪ್ಪ ಅವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದ ಸಂದರ್ಭದ ಸಂಗ್ರಹ ಚಿತ್ರ
ಬಿ.ಎಸ್.ಯಡಿಯೂರಪ್ಪ ಅವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದ ಸಂದರ್ಭದ ಸಂಗ್ರಹ ಚಿತ್ರ   

ನವದೆಹಲಿ:ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿರುವ ಪ್ರಧಾನಿ ನರೇಂದ್ರ ಮೋದಿ, ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೊಂಡಾಡಿದ್ದಾರೆ.

‘ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು. ಅವರು ಅತ್ಯುತ್ತಮ ಶಾಸಕಾಂಗ ಮತ್ತು ಆಡಳಿತಾತ್ಮಕ ಅನುಭವ ಹೊಂದಿದ್ದಾರೆ. ನಮ್ಮ ಸರ್ಕಾರವು ರಾಜ್ಯದಲ್ಲಿ ಮಾಡಿದ ಅತ್ಯುತ್ತಮ ಕಾರ್ಯಗಳನ್ನು ಅವರು ಮುಂದುವರಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ. ಅಧಿಕಾರ ಫಲಪ್ರದವಾಗಲಿ ಎಂಬ ಶುಭ ಹಾರೈಕೆಗಳು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

‘ನಮ್ಮ ಪಕ್ಷ ಮತ್ತು ಕರ್ನಾಟಕದ ಬೆಳವಣಿಗೆಗೆ ಬಿ.ಎಸ್.ಯಡಿಯೂರಪ್ಪ ಅವರು ನೀಡಿರುವ ಅಭೂತಪೂರ್ವ ಕೊಡುಗೆಯನ್ನು ಪದಗಳಲ್ಲಿ ವರ್ಣಿಸಲಾಗದು. ದಶಕಗಳ ಕಾಲ ಅವರು ಕಷ್ಟಪಟ್ಟು ದುಡಿದು, ಕರ್ನಾಟಕದ ಎಲ್ಲಾ ಭಾಗಗಳಲ್ಲಿ ಸಂಚರಿಸಿ ಜನರೊಂದಿಗೆ ಬೆರೆತಿದ್ದರು. ಸಾಮಾಜಿಕ ಕಲ್ಯಾಣ ವಿಚಾರದಲ್ಲಿ ತೋರ್ಪಡಿಸಿದ ಬದ್ಧತೆಗಾಗಿ ಅವರು ಮೆಚ್ಚುಗೆ ಪಡೆದಿದ್ದಾರೆ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೊಂಡಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.