ADVERTISEMENT

ಬೆಂಗಳೂರಿನ ಐಐಎಸ್ಸಿಯಲ್ಲಿ ಮೋದಿ ಮಿಂಚು: ಮೆದುಳು ಸಂಶೋಧನಾ ಕೇಂದ್ರ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2022, 9:42 IST
Last Updated 20 ಜೂನ್ 2022, 9:42 IST
ಧಾನಿ ನರೇಂದ್ರ ಮೋದಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಛಾಟಿಸಿದರು.
ಧಾನಿ ನರೇಂದ್ರ ಮೋದಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಛಾಟಿಸಿದರು.   

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಭಾರತೀಯವಿಜ್ಞಾನ ಸಂಸ್ಥೆಯಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಛಾಟಿಸಿ, ಬಾಗ್ಚಿ ಪಾರ್ಥಸಾರಥಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದರು.

ಮೆದುಳು ಸಂಶೋಧನಾ ಕೇಂದ್ರ ದೇಶದ ಅತಿದೊಡ್ಡ ಸಂಶೋಧನಾ ಕೇಂದ್ರವಾಗಿದ್ದು, ವಯಸ್ಸಿಗೆ ಸಂಬಂಧಿಸಿ ಮೆದುಳಿನ ಅಸ್ವಸ್ಥತೆಗಳು, ಅದಕ್ಕೆ ಕಾರಣ ಮತ್ತು ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಶೋಧನೆಗಳು ನಡೆಯಲಿವೆ. ಈ ಕೇಂದ್ರದ ಶಂಕುಸ್ಥಾಪನೆಯನ್ನೂ ಮೋದಿಯವರೇ ನೆರವೇರಿಸಿದರು.

ಅಲ್ಲದೆ, ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣ ಅವರು ನೀಡಿರುವ ₹425ಕೋಟಿ ದೇಣಿಗೆಯಲ್ಲಿ ಬಾಗ್ಚಿ ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಾಗುವುದು. 833ಹಾಸಿಗೆಗಳ ಈ ಆಸ್ಪತ್ರೆಯಲ್ಲಿ ವಿಜ್ಞಾನ, ಎಂಜಿನಿಯರಿಂಗ್ ಮತ್ತು ವೈದ್ಯಕೀಯ ವಲಯಕ್ಕೆ ಸಂಬಂಧಿಸಿದ ಸಂಶೋಧನೆ ಗಳು ನಡೆಯಲಿವೆ. ಕ್ಲಿನಿಕಲ್ ಸಂಶೋಧನೆಗೆ ವೇದಿಕೆಯಾಗಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.