ADVERTISEMENT

ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ

​ಪ್ರಜಾವಾಣಿ ವಾರ್ತೆ
Published 1 ಜನವರಿ 2020, 21:06 IST
Last Updated 1 ಜನವರಿ 2020, 21:06 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿದ್ದು, ಗುರುವಾರ ನಗರದ ಮೂಲಕ ಪ್ರವಾಸ ಆರಂಭಿಸಲಿದ್ದಾರೆ.

ವಿಶೇಷ ವಿಮಾನದ ಮೂಲಕ ಯಲಹಂಕ ವಾಯುಪಡೆಯ ನಿಲ್ದಾಣಕ್ಕೆ ಬರಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ತೆರಳಲಿದ್ದು, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದು, ರೈತರ ಸಮಾವೇಶದಲ್ಲಿ ಪಾಲ್ಗೊಳ್ಳುವರು.

ಬೆಂಗಳೂರಿಗೆ ವಾಪಸಾಗಲಿದ್ದು, ಡಿಆರ್‌ಡಿಒ ಏರ್ಪಡಿಸಿರುವ ಯುವ ವಿಜ್ಞಾನಿಗಳ ಸಮ್ಮೇಳನದಲ್ಲಿ ಭಾಗವಹಿಸುವರು.

ADVERTISEMENT

ಜ. 3ರಂದು ಕೃಷಿ ವಿಶ್ವವಿದ್ಯಾಲಯದಲ್ಲಿ‘ವಿಜ್ಞಾನ ಕಾಂಗ್ರೆಸ್’ ಸಮಾವೇಶಕ್ಕೆ ಚಾಲನೆ ನೀಡುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.