ADVERTISEMENT

ಕೇಂದ್ರ ಸಚಿವ ಅನಂತಕುಮಾರ್ ಆರೋಗ್ಯ ವಿಚಾರಿಸಲು ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ

ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಚಿವರು

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2018, 5:06 IST
Last Updated 3 ನವೆಂಬರ್ 2018, 5:06 IST
ಕೇಂದ್ರ ಸಚಿವ ಅನಂತಕುಮಾರ್ ಮತ್ತು ಪ್ರಧಾನಿ ನರೇಂದ್ರ ಮೋದಿ
ಕೇಂದ್ರ ಸಚಿವ ಅನಂತಕುಮಾರ್ ಮತ್ತು ಪ್ರಧಾನಿ ನರೇಂದ್ರ ಮೋದಿ   

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಕೇಂದ್ರ ಸಚಿವ ಅನಂತಕುಮಾರ್ ಅವರನ್ನು ಭೇಟಿ ಮಾಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯಾಹ್ನ ನಗರಕ್ಕೆ ಆಗಮಿಸಲಿದ್ದಾರೆ.

ರಾಜಭವನಕ್ಕೆ ಬರಲಿರುವ ಮೋದಿ ಅವರು ಅಲ್ಲಿಂದ ನೇರವಾಗಿ ಅನಂತಕುಮಾರ್ ಚಿಕಿತ್ಸೆ ಪಡೆಯುತ್ತಿರುವ ಶಂಕರ ಆಸ್ಪತ್ರೆಗೆ ತೆರಳಲಿದ್ದಾರೆ.

ಅನಂತಕುಮಾರ್ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಭಾನುವಾರ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಅನಂತಕುಮಾರ್ ಆರೋಗ್ಯ ವಿಚಾರಿಸಿದ್ದರು. ಸಚಿವರ ಆರೋಗ್ಯ ವಿಚಾರಿಸುವುದಕ್ಕೆಂದೇ ರಾಜನಾಥ್ ಸಿಂಗ್ ಬೆಂಗಳೂರಿಗೆ ಬಂದಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.