ADVERTISEMENT

ಪಿ.ಎಂ.ಪೆಮ್ಮಯ್ಯ ನಿಧನ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2021, 18:06 IST
Last Updated 3 ಫೆಬ್ರುವರಿ 2021, 18:06 IST
ಪಿ.ಎಂ.ಪೆಮ್ಮಯ್ಯ
ಪಿ.ಎಂ.ಪೆಮ್ಮಯ್ಯ   

ಬೆಂಗಳೂರು: ಕರ್ನಾಟಕ ರಾಜ್ಯ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾಗಿದ್ದ ಪಿ.ಎಂ.ಪೆಮ್ಮಯ್ಯ (72) ಅವರು ಅನಾರೋಗ್ಯದಿಂದಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಮಧ್ಯಾಹ್ನ ನಿಧನರಾದರು.

ಅವರು ದೀರ್ಘಕಾಲದ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಪೊಲೀಸ್‌ ಇಲಾಖೆಯಲ್ಲಿ ಎಸ್‌ಪಿ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಅವರು ಜೆ.ಪಿ.ನಗರದಲ್ಲಿ ವಾಸವಿದ್ದರು.

ಅವರಿಗೆ ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ಬಳಿಯ ಸ್ವಗ್ರಾಮ ಹಾಲುಗುಂದದಲ್ಲಿ ಗುರುವಾರ ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.