ಮೋದಿ
ಹಾಸನ: ನಿನ್ನೆ ರಾತ್ರಿ ಹಾಸನದ ಶಾಂತಿಗ್ರಾಮದ ಬಳಿ ಮೊಸಳೆ ಹೊಸಹಳ್ಳಿಯಲ್ಲಿ ನಡೆದ ಗಣೇಶ ಮೆರವಣಿಗೆ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಅವರು ಸಂತಾಪ ಸೂಚಿಸಿದ್ದಾರೆ.
ಮೃತರ ಕುಟುಂಬಗಳಿಗೆ PMNRF ನಿಂದ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50 ಸಾವಿರ ಘೋಷಣೆ ಮಾಡಲಾಗಿದೆ.
ಹಾಸನ ದುರಂತ ಘೋರ ದುರಂತವಾಗಿದ್ದು ಮೃತರ ಕುಟುಂಬಳಿಗೆ ನಮ್ಮ ಸಂತಾಪಗಳು ಎಂದು ಪಿಎಂಒ ಇಂಡಿಯಾ ಮೋಡಿ ಹೆಸರಿನಲ್ಲಿ ಟ್ವೀಟ್ ಮಾಡಿದೆ.
ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಸರಕು ಲಾರಿ ನುಗ್ಗಿದ್ದು, ಕನಿಷ್ಠ 9 ಜನರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 373 ರಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಸಾಗುತ್ತಿತ್ತು. ಹೆದ್ದಾರಿಯಲ್ಲಿ ಸಾಗುತ್ತಿದ್ದ ಕ್ಯಾಂಟರ್ ಲಾರಿಗೆ ಬೈಕ್ ಅಡ್ಡ ಬಂದಿದೆ.
ಇದನ್ನು ತಪ್ಪಿಸಲು ಕ್ಯಾಂಟರ್ ಚಾಲಕ ಯತ್ನಿಸಿದ್ದಾನೆ. ಈ ವೇಳೆ ರಸ್ತೆ ವಿಭಜಕ ದಾಟಿದ ಕ್ಯಾಂಟರ್ ಲಾರಿ ಮೆರವಣಿಗೆ ಮೇಲೆ ಎರಗಿದೆ. ಈ ವೇಳೆ ಸ್ಥಳದಲ್ಲಿದ್ದ 9 ಜನರು ಮೃತಪಟ್ಟಿದ್ದು, 17 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.
ಘಟನೆಯಲ್ಲಿ ಮೃತರಾದ ವಿವರವನ್ನು ಸರ್ಕಾರ ಹಂಚಿಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.