ಬೆಂಗಳೂರು: ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಪ್ರಕರಣದಲ್ಲಿ ಹೊಸದಾಗಿ ಸಂಜ್ಞೇಯ ಅಪರಾಧ ಪರಿಗಣಿಸುವಂತೆ ಜನಪ್ರತಿನಿಧಿಗಳ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿರುವ ಆದೇಶದಲ್ಲಿ ಕೆಲವೊಂದು ಅಂಶಗಳನ್ನು ಕೈಬಿಡಬೇಕು ಮತ್ತು ಜಾಮೀನಿಗೆ ವಿಧಿಸಲಾಗಿರುವ ಷರತ್ತುಗಳನ್ನು ಸಡಿಲಿಸಬೇಕು’ ಎಂ ಕೋರಿ ಆರೋಪಿಯೂ ಆದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಕುರಿತ ಎರಡು ಪ್ರತ್ಯೇಕ ಮಧ್ಯಂತರ ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ ಪ್ರಾಸಿಕ್ಯೂಷನ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.
ವಿಚಾರಣೆ ವೇಳೆ ವಿಶೇಷ ಪ್ರಾಸಿಕ್ಯೂಟರ್ ಅಶೋಕ್ ಎನ್.ನಾಯಕ್, ‘ಆರೋಪಿಯು ಈಗಾಗಲೇ ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ’ ಎಂದು ಆರೋಪಿಸಿದರು. ಕೆಲಕಾಲ ವಿಚಾರಣೆ ಆಲಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.