ADVERTISEMENT

ರಾಜಿ ಸಂಧಾನ: ಬಾಲಕನ ವಿರುದ್ಧ ದಾಖಲಾಗಿದ್ದ ಪೋಕ್ಸೊ ಪ್ರಕರಣ ರದ್ದು

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2022, 18:18 IST
Last Updated 10 ಸೆಪ್ಟೆಂಬರ್ 2022, 18:18 IST
   

ಬೆಂಗಳೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಬಾಲಕನೊಬ್ಬನ ವಿರುದ್ಧದ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ ಅಡಿ ದಾಖಲಾಗಿದ್ದ ಪ್ರಕರಣ
ವನ್ನು ಹೈಕೋರ್ಟ್ ರದ್ದುಪಡಿಸಿದೆ.

ಪ್ರಕರಣ ರದ್ದು ಕೋರಿ ಆರೋಪಿ ಬಾಲಕನ ಪರವಾಗಿ ಆತನ ತಂದೆ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನುನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕಟಿಸಿದೆ.

‘ಆರೋಪಿ ಹಾಗೂ ಸಂತ್ರಸ್ತೆಒಂದೇ ತರಗತಿಯಲ್ಲಿ ಓದುತ್ತಿದ್ದುಸ್ನೇಹಿತರಾಗಿದ್ದಾರೆ. ಪರಸ್ಪರರ ಮೇಲೆ ಮೂಡಿದ್ದ ಆಕರ್ಷಣೆಯಿಂದ ಈ ಕೃತ್ಯ ನಡೆದಿದೆ. ವಿಶೇಷವಾಗಿ ಬಾಲಕ–ಬಾಲಕಿಯರ 10ರಿಂದ 19 ವರ್ಷಗಳ ಮಧ್ಯದ ಅವಧಿಯು ಯೌವ್ವನಕ್ಕೆ ಕಾಲಿಡುವ ಹಂತ. ಈ ಹಂತದಲ್ಲಿ ಮಕ್ಕಳು ತಮ್ಮ ನಡವಳಿಕೆಯಿಂದ ಮುಂದಾಗುವ ಪರಿಣಾಮಗಳನ್ನು ನಿರ್ಲಕ್ಷಿಸುತ್ತಾರೆ. ಹೀಗಾಗಿ, ಪೋಕ್ಸೊ ಪ್ರಕರಣಗಳಲ್ಲಿ ಸಿಲುಕಿ, ಗಂಭೀರ ಪರಿಣಾಮ ಎದುರಿಸುತ್ತಾರೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ADVERTISEMENT

‘ಆರೋಪಿ ಬಾಲಕನ ಅಂಕಪಟ್ಟಿ ಪರಿಶೀಲಿಸಿದರೆ, ಆತ ಪ್ರತಿಭಾವಂತ ವಿದ್ಯಾರ್ಥಿಯಾಗಿರುವುದು ಕಂಡು ಬರುತ್ತಿದೆ. ಇದೇ ವೇಳೆ ಸಂತ್ರಸ್ತೆ ಹಾಗೂ ಆರೋಪಿಯ ಪಾಲಕರು ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಲು
ನಿರ್ಧರಿಸಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜಿ ನಿರ್ಧಾರವನ್ನು ಒಪ್ಪಿಕೊಂಡು ಆರೋಪಿಯನ್ನು ಪ್ರಕರಣದಿಂದ ಮುಕ್ತಿಗೊಳಿಸುವುದು ಸೂಕ್ತ’ ಎಂದು ನ್ಯಾಯಪೀಠ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.