ADVERTISEMENT

ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2020, 13:55 IST
Last Updated 26 ಮಾರ್ಚ್ 2020, 13:55 IST

ಗೋಕಾಕ: ನಗರದ ಎರಡು ಪ್ರಾರ್ಥನಾ ಮಂದಿರಗಳಲ್ಲಿ ಗುರುವಾರ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದ ಹಲವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು.

ಖಬರಸ್ತಾನ ಮಸೀದಿ ಮತ್ತು ನದಾಫ್‌ಗಲ್ಲಿ ಮಸೀದಿಯಲ್ಲಿ ಬಹು ಸಂಖ್ಯೆಯಲ್ಲಿ ಜನರು ಸೇರಿ ಸಾಮೂಹಿಕ ಪ್ರಾರ್ಥನೆ ಮಾಡುತ್ತಿದ್ದರು. ಕೊರೊನಾ ವೈರಾಣು ಹರಡದಂತೆ ತಡೆಗಟ್ಟುವ ಹಿನ್ನೆಲೆಯಲ್ಲಿ ಜನರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಾರದು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಆದೇಶ ನೀಡಿದ್ದರು.

ಈ ಆದೇಶವನ್ನು ಉಲ್ಲಂಘಿಸಿ ಹಲವು ಜನರು ಪ್ರಾರ್ಥನೆಯನ್ನು ತೊಡಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಲಘು ಲಾಠಿ ಪ್ರಹಾರ ನಡೆಸಿ, ಜನರನ್ನು ಚದುರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.