ADVERTISEMENT

ಪೊಲೀಸ್‌ ಕಾನ್‌ಸ್ಟೆಬಲ್‌ ಪರೀಕ್ಷೆ: ಅಂತಿಮ ಕೀ ಉತ್ತರ ಪ್ರಕಟ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2020, 19:15 IST
Last Updated 12 ಅಕ್ಟೋಬರ್ 2020, 19:15 IST

ಬೆಂಗಳೂರು: ಸೆಪ್ಟೆಂಬರ್‌ 20ರಂದು ನಡೆದಿದ್ದ ಪೊಲೀಸ್‌ ಕಾನ್‌ಸ್ಟೆಬಲ್‌ ನೇಮಕಾತಿ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಸೋಮವಾರ ಪ್ರಕಟಿಸಲಾಗಿದೆ.

ಇಲಾಖೆಯ ವೆಬ್‌ಸೈಟ್‌ www.ksp.gov.in ನಲ್ಲಿ ಸೆ.23ರಂದು ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಲಾಗಿತ್ತು. ಅಭ್ಯರ್ಥಿಗಳಿಂದ ಆಕ್ಷೇಪಣೆ ಆಹ್ವಾನಿಸಲಾಗಿತ್ತು. ಮೊದಲು ಪ್ರಕಟಿಸಲಾಗಿದ್ದ ಉತ್ತರಗಳಲ್ಲಿ ಎರಡು ಪ್ರಶ್ನೆಗಳ ಉತ್ತರ ತಪ್ಪಾಗಿದ್ದು, ಅವುಗಳನ್ನು ಸರಿಪಡಿಸಿ ಅಂತಿಮ ಉತ್ತರಗಳನ್ನು ಪ್ರಕಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT