ADVERTISEMENT

ಕಪ್ಪು ಟೀ ಶರ್ಟ್‌ ತೆಗಿರಿ: ಸಿಎಂ ಕಾರ್ಯಕ್ರಮಕ್ಕೆ ಬಂದಿದ್ದವರಿಗೆ ಪೊಲೀಸರ ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2021, 12:41 IST
Last Updated 11 ಜುಲೈ 2021, 12:41 IST
ಕಾರ್ಯಕ್ರಮವೊಂದಕ್ಕೆ ತೆರಳುತ್ತಿರುವ ಸಿಎಂ ಬಿ ಎಸ್‌ ಯಡಿಯೂರಪ್ಪ
ಕಾರ್ಯಕ್ರಮವೊಂದಕ್ಕೆ ತೆರಳುತ್ತಿರುವ ಸಿಎಂ ಬಿ ಎಸ್‌ ಯಡಿಯೂರಪ್ಪ    

ಕಲಬುರ್ಗಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗವಹಿಸಿದ್ದ ಕಣ್ಣಿ ಮಾರ್ಕೆಟ್‌ ಕಟ್ಟಡದ ಅಡಿಗಲ್ಲು ಸಮಾರಂಭದ ಕಾರ್ಯಕ್ರಮ ವೀಕ್ಷಿಸಲು ಬಂದಿದ್ದ ವ್ಯಕ್ತಿಯೊಬ್ಬರಿಗೆ ಶಾಕ್ ಕಾದಿತ್ತು.

ಕಾರ್ಯಕ್ರಮ ಸ್ಥಳಕ್ಕೆ ತೆರಳುವ ಸಂದರ್ಭದಲ್ಲಿ ಅವರನ್ನು ತಡೆದ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು, ಕಪ್ಪು ಟೀ ಶರ್ಟ್‌ ತೆಗೆದು ಬೇರೆ ಬಟ್ಟೆ ಹಾಕಿಕೊಂಡು ಬಂದರೆ ಒಳಗೆ ಹೋಗಲು ಅವಕಾಶ ನೀಡುವುದಾಗಿ ತಿಳಿಸಿದರು. ಇದರಿಂದ ತಬ್ಬಿಬ್ಬುಕೊಂಡ ಆ ವ್ಯಕ್ತಿ ಏಕೆ ಎಂದಾಗ, ‘ಆ ಟೀ ಶರ್ಟ್‌ ಕಳಚಿ ಧ್ವಜದ ರೀತಿ ಬಳಸಿ ಮುಖ್ಯಮಂತ್ರಿ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಬಹುದು’ ಎಂದು ಪ್ರತ್ಯುತ್ತರ ಕೊಟ್ಟರು.

ಇದರಿಂದ ಕಕ್ಕಾಬಿಕ್ಕಿಯಾದ ಆ ವ್ಯಕ್ತಿ, ಅಂತಹ ಯಾವ ಉದ್ದೇಶವೂ ತಮಗಿಲ್ಲ ಎಂದು ತಮ್ಮ ಪರಿಚಯ ಹೇಳಿಕೊಳ್ಳಲು ಮುಂದಾದರು. ಅಷ್ಟರಲ್ಲಿ ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿ ಅವರನ್ನು ಗುರುತು ಹಿಡಿದು ಒಳಗೆ ಕಳಿಸಿದರು.

ADVERTISEMENT

ಲೋಕೋಪಯೋಗಿ ಇಲಾಖೆಯ ಕಟ್ಟಡ ಉದ್ಘಾಟನೆಗೆ ತೆರಳಿದ್ದ ಸಾರ್ವಜನಿಕರು ಹಾಕಿದ್ದ ಕಪ್ಪು ಮಾಸ್ಕ್ ತೆಗೆಸಿ ನೀಲಿ ಮಾಸ್ಕ್‌ಗಳನ್ನು ವಿತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.