ADVERTISEMENT

ಪೊಲೀಸ್‌ ಕಾನ್‌ಸ್ಟೆಬಲ್‌ ಅಂತರಜಿಲ್ಲಾ ವರ್ಗಾವಣೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2025, 15:56 IST
Last Updated 11 ಸೆಪ್ಟೆಂಬರ್ 2025, 15:56 IST
<div class="paragraphs"><p>ಪೊಲೀಸ್</p></div>

ಪೊಲೀಸ್

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಏಳು ವರ್ಷಗಳ ಸೇವಾವಧಿ ಪೂರ್ಣಗೊಳಿಸಿರುವ ಕಾನ್‌ಸ್ಟೆಬಲ್‌ ಹಾಗೂ ಹೆಡ್‌ ಕಾನ್‌ಸ್ಟೆಬಲ್‌ಗಳು (ಪತಿ– ಪತ್ನಿ ಪ್ರಕರಣಗಳು) ಅಂತರ ಜಿಲ್ಲಾ ವರ್ಗಾವಣೆ ಕೋರಿದ್ದರೆ, ಅಂತಹ ಪ್ರಕರಣಗಳನ್ನು ಕಡ್ಡಾಯವಾಗಿ ಪರಿಗಣಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ ಅವರು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಎಂ.ಎ.ಸಲೀಂ ಅವರಿಗೆ ಸೂಚಿಸಿ ಪತ್ರ ಬರೆದಿದ್ದಾರೆ.

ADVERTISEMENT

ಸಿಬ್ಬಂದಿ ಕೋರಿರುವ ಜಿಲ್ಲೆಗಳಿಗೆ ಕೂಡಲೇ ವರ್ಗಾವಣೆ ಮಾಡಿ ತಮ್ಮ ಕಚೇರಿಗೆ ಮಾಹಿತಿ ಒದಗಿಸುವಂತೆ ಗೃಹ ಸಚಿವರು ಆದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.