ಬೆಂಗಳೂರು: ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ಕೆಲಸ ಮಾಡುತ್ತಿದ್ದ ಕೊರೊನಾ ಸೋಂಕಿತ 59 ವರ್ಷದ ಪಿಎಸ್ಐಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ.
ಇನ್ಫೆಂಟ್ರಿ ರಸ್ತೆಯಲ್ಲಿರುವ ಪೊಲೀಸ್ ಕಮಿಷನರ್ ಕಚೇರಿ ನಿಯಂತ್ರಣ ಕೊಠಡಿಯಲ್ಲಿ ಪಿಎಸ್ಐ ಕೆಲಸ ಮಾಡುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಾಗಿದ್ದರು. ಗಂಟಲಿನ ದ್ರವದ ಪರೀಕ್ಷೆ ನಡೆಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು.
ಅಂದಿನಿಂದಲೇ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ಬೆಳಿಗ್ಗೆ ಅಸುನೀಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.