ADVERTISEMENT

ಎಎಸ್‌ಐ ಬಡ್ತಿ: ಕಡ್ಡಾಯ ಸೇವಾವಧಿ ಇಳಿಕೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 21:41 IST
Last Updated 5 ಅಕ್ಟೋಬರ್ 2021, 21:41 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಪೊಲೀಸ್‌ ಇಲಾಖೆಯಲ್ಲಿ ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌ಗಳಿಗೆ (ಎಎಸ್‌ಐ) ಮುಂದಿನ ಶ್ರೇಣಿಗೆ ಬಡ್ತಿ ಪಡೆಯಲು ಇದ್ದ ಐದು ವರ್ಷಗಳ ಕನಿಷ್ಠ ಸೇವಾ ಅವಧಿಯನ್ನುನಾಲ್ಕು ವರ್ಷಗಳಿಗೆ ಇಳಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಇದಕ್ಕಾಗಿಪೊಲೀಸ್‌ ಲಿಪಿಕ ಸೇವೆ ನೇಮಕ ಕಾಯ್ದೆ ತಿದ್ದುಪಡಿಗೆ ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.

ಬಡ್ತಿಗೆ ಅರ್ಹ ಅಭ್ಯರ್ಥಿಗಳು ಇಲ್ಲದಾಗ ಉಳಿದವರಿಗೆ ಬಡ್ತಿ ನೀಡಲು ಎಂಟು ವರ್ಷಗಳ ಕಡ್ಡಾಯ ಸೇವೆಯನ್ನು ಐದು ವರ್ಷಗಳಿಗೆ ಇಳಿಸಲಾಗಿತ್ತು. ಅದನ್ನು ಈಗ ನಾಲ್ಕು ವರ್ಷಗಳಿಗೆ ಇಳಿಸಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.