ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ನಡೆದ ಹಿಂಸಾಚಾರ ಹಾಗೂ ಪೊಲೀಸ್ ಗೋಲಿಬಾರ್ ಕುರಿತಂತೆ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು’ ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಐ.ಕೆ. ಮೊಹಮ್ಮದ್ ಇಕ್ಬಾಲ್ ಎಲಿಮಲೆ ಹಾಗೂ ಬಿ. ಉಮ್ಮರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.