ADVERTISEMENT

ಈ ವರ್ಷ ಪೊಲೀಸರಿಗೆ 11 ಸಾವಿರ ವಸತಿಗೃಹ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಪೊಲೀಸ್ ವಸತಿ ಗೃಹ, ಸಂಚಾರಿ ಪೊಲೀಸ್ ಠಾಣೆ, ವೈರ್‌ಲೆಸ್ ತರಬೇತಿ ಶಾಲೆ ಉದ್ಘಾಟಿಸಿದ ಸಿಎಂ

​ಪ್ರಜಾವಾಣಿ ವಾರ್ತೆ
Published 19 ಜೂನ್ 2020, 7:54 IST
Last Updated 19 ಜೂನ್ 2020, 7:54 IST
ಪೊಲೀಸ್ ವಸತಿಗೃಹ, ಸಂಚಾರಿ ಪೊಲೀಸ್ ಠಾಣೆ ಹಾಗೂ ವೈರ್‌ಲೆಸ್ ತರಬೇತಿ ಶಾಲೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಉದ್ಘಾಟಿಸಿದರು.
ಪೊಲೀಸ್ ವಸತಿಗೃಹ, ಸಂಚಾರಿ ಪೊಲೀಸ್ ಠಾಣೆ ಹಾಗೂ ವೈರ್‌ಲೆಸ್ ತರಬೇತಿ ಶಾಲೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಉದ್ಘಾಟಿಸಿದರು.   

ಬೆಂಗಳೂರು: ಪೊಲೀಸರು ಮತ್ತು ಪೊಲೀಸ್ ಅಧಿಕಾರಿಗಳ ವಾಸ್ತವ್ಯಕ್ಕಾಗಿ ನಿರ್ಮಿಸಲಾಗುತ್ತಿರುವ 11 ಸಾವಿರ ವಸತಿಗೃಹಗಳನ್ನು ಈ ವರ್ಷವೇ ಪೂರ್ಣಗೊಳಿಸಿ ಕೊಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು

ಅವರು ಶುಕ್ರವಾರ ಬೆಂಗಳೂರು ನಗರವ್ಯಾಪ್ತಿಯಲ್ಲಿ ನಿರ್ಮಿಸಿರುವ ಪೊಲೀಸ್ ವಸತಿಗೃಹ, ಸಂಚಾರಿ ಪೊಲೀಸ್ ಠಾಣೆ ಹಾಗೂ ವೈರ್‌ಲೆಸ್ ತರಬೇತಿ ಶಾಲೆಯನ್ನು ಉದ್ಘಾಟಿಸಿ ಮಾತನಾಡಿದರು.

2025ರ ವೇಳೆಗೆ ಇನ್ನೂ 10 ಸಾವಿರ ವಸತಿಗೃಹಗಳ ನಿರ್ಮಾಣ ಕಾರ್ಯಕ್ಕೆ ಈಗಿನಿಂದಲೇ ಸಿದ್ಧತೆ ಅರಂಭಿಸಲು ಅಧಿಕಾರಿಗಳಿಗೆ ಸೂಚಿಸಿದ ಅವರು, ಅದಕ್ಕಾಗಿ ಐದು ವರ್ಷಗಳಲ್ಲಿ ₹2,200 ಕೋಟಿ ಒದಗಿಸಲಾಗುವುದು ಎಂದರು.

ADVERTISEMENT

ಬಾಡಿಗೆ ಕಟ್ಟಡದಲ್ಲಿರುವ ಹಾಗೂ ಶಿಥಿಲವಾಗಿರುವ ಪೊಲೀಸ್ ಠಾಣೆಗಳಿಗೆ ಹೊಸ ಕಟ್ಟಡ ನಿರ್ಮಿಸಲು ಸೂಚಿಸಲಾಗಿದೆ. ಇದಕ್ಕೆ ಬಜೆಟ್‌ನಲ್ಲಿ ಸಾಕಷ್ಟು ಹಣ ಒದಗಿಸಲಾಗುವುದು. ಪೊಲೀಸ್ ತರಬೇತಿ ಶಾಲೆಗಳಲ್ಲಿ ಉತ್ತಮ ಮೂಲಸೌಲಭ್ಯ ಒದಗಿಸಲು ಸೂಚಿಸಲಾಗಿದೆ ಎಂದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.