ಗೌರಿಬಿದನೂರು (ಚಿಕ್ಕಬಳ್ಳಾಪುರ): ಹಿಂದೂಪುರದಿಂದ ಬೆಂಗಳೂರಿಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಎಂಟು ಟನ್ ಗೋಮಾಂಸವನ್ನು ಚಿಕ್ಕಬಳ್ಳಾಪುರ ಸೆನ್ ಪೊಲೀಸರು ಭಾನುವಾರ ತಾಲ್ಲೂಕಿನ ಮಂಚೇನಹಳ್ಳಿಯ ಮಿಣಕನಗುರ್ಕಿ ಬಳಿ ವಶಪಡಿಸಿಕೊಂಡಿದ್ದಾರೆ.
ಮೂಟೆ ಮತ್ತು ಟೊಮೆಟೊ ಡಬ್ಬಗಳನ್ನು ಮಾಂಸದ ಗುಡ್ಡೆಗೆ ಅಡ್ಡಲಾಗಿ ಇಟ್ಟು ಲಾರಿಯಲ್ಲಿ ಬೆಂಗಳೂರಿನ ಶಿವಾಜಿ ನಗರಕ್ಕೆ ಮಾಂಸ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಪೊಲೀಸರಿಗೆ ಸುಳಿವು ದೊರೆತಿತ್ತು. ವಶಕ್ಕೆ ಪಡೆಯಲಾದ ಮಾಂಸದ ಮೌಲ್ಯ ₹16 ಲಕ್ಷ ಎಂದು ಅಂದಾಜಿಸಲಾಗಿದೆ.
ಹಿಂದೂಪುರದ ಆರೀಫ್, ಅಸೀಂ ಬಾಷಾ, ಬೆಂಗಳೂರು ಶಿವಾಜಿನಗರದ ರನ್ ಮತ್ತು ನೂರುಲ್ಲಾ ಶರೀಫ್ ಎಂಬುವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಸೆನ್ ಡಿವೈಎಸ್ಪಿ ರವಿಕುಮಾರ್, ಇನ್‌ಸ್ಪೆಕ್ಟರ್ ಸೂರ್ಯಪ್ರಕಾಶ್, ಪಿಎಸ್ಐ ಸರಸ್ವತಮ್ಮ ಹಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.