ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಅವರ ಗೆಳತಿ ಪವಿತ್ರಾಗೌಡ ಸೇರಿದಂತೆ ಏಳು ಮಂದಿಯ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಬೆನ್ನಲ್ಲೇ ಎಲ್ಲರನ್ನೂ ಬಂಧಿಸಲು ಪೊಲೀಸರು ಸಿದ್ದತೆ ನಡೆಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಪ್ರತಿಗಾಗಿ ಕಾಯುತ್ತಿದ್ದೇವೆ. ಆದೇಶದಲ್ಲಿ ಯಾವ ಅಂಶಗಳಿವೆ ಎಂಬುದನ್ನು ಪರಿಶೀಲಿಸಿ ಅದರಂತೆ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದರು.
ದರ್ಶನ್ ಅವರು ಸದ್ಯ ತಮಿಳುನಾಡಿನಲ್ಲಿದ್ದಾರೆ. ಸಂಜೆಯ ವೇಳೆಗೆ ಅವರು ಬೆಂಗಳೂರಿಗೆ ಬರುವ ಸಾಧ್ಯತೆಯಿದೆ. ಕೋರ್ಟ್‌ಗೆ ಬಂದು ಅವರೇ ಶರಣಾದರೆ ಅಲ್ಲಿಂದಲೇ ವಶಕ್ಕೆ ಪಡೆದುಕೊಳ್ಳಲಾಗುವುದು. ಇಲ್ಲದಿದ್ದರೆ ಎಲ್ಲ ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುವುದು ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.