ADVERTISEMENT

ಪೊಲೀಸ್‌ ನೇಮಕ: ‌ಕ್ರೀಡಾ ಮೀಸಲಾತಿ ಶೇ 3ಕ್ಕೆ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 30 ಜನವರಿ 2025, 14:34 IST
Last Updated 30 ಜನವರಿ 2025, 14:34 IST
<div class="paragraphs"><p>ಪೊಲೀಸ್‌ (ಸಾಂಧರ್ಭಿಕ ಚಿತ್ರ)</p></div>

ಪೊಲೀಸ್‌ (ಸಾಂಧರ್ಭಿಕ ಚಿತ್ರ)

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೆಬಲ್‌ನಿಂದ ಡಿವೈಎಸ್‌ಪಿ ವರೆಗಿನ ಹುದ್ದೆಗಳಿಗೆ ನಡೆಯುವ ನೇರ ನೇಮಕಾತಿ ಸಂದರ್ಭದಲ್ಲಿ ಉತ್ತಮ ಸಾಧನೆ ತೋರಿದ‌ ಕ್ರೀಡಾಪಟುಗಳಿಗೆ ನಿಗದಿಪಡಿಸಿದ್ದ ಮೀಸಲಾತಿ ಪ್ರಮಾಣವನ್ನು ಶೇ 2ರಿಂದ ಶೇ 3ಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ADVERTISEMENT

ಅಲ್ಲದೆ, ಡಿವೈಎಸ್‌ಪಿ ಹುದ್ದೆಗಳ ನೇಮಕಾತಿಗೆ ಎಸ್‌ಸಿ, ಎಸ್‌ಟಿ (ಕೆಟಗರಿ 1) ಅಭ್ಯರ್ಥಿಗಳಿಗೆ ನಿಗದಿಪಡಿಸಿದ್ದ ಗರಿಷ್ಠ ವಯೋಮಿತಿಯನ್ನು 45 ವರ್ಷಗಳಿಗೆ ಹೆಚ್ಚಿಸಲು ಕೂಡಾ ಅನುಮೋದನೆ ನೀಡಿದೆ.

ಮೀಸಲಾತಿ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಪೊಲೀಸ್ ಸೇವೆಗಳು (ಕಾನ್‌ಸ್ಟೆಬಲ್‌, ಸಬ್‌ ಇನ್‌ಸ್ಪೆಕ್ಟರ್ ಮತ್ತು ಡಿವೈಎಸ್‌ಪಿ ಹುದ್ದೆಗೆ ಪ್ರತಿಭಾವಂತ ಕ್ರೀಡಾಪಟುಗಳ ನೇರ ನೇಮಕಾತಿ) (ವಿಶೇಷ) (ತಿದ್ದುಪಡಿ) ನಿಯಮಗಳು– 2025ರ ಕರಡು ನಿಯಮಗಳ ಗೆಜೆಟ್‌ ಹೊರಡಿಸಿ, ಆಕ್ಷೇಪಣೆ ಆಹ್ವಾನಿಸಬೇಕು. ಈ ನಿಯಮ ತಿದ್ದುಪಡಿಗೆ ಸಂಬಂಧಿಸಿದಂತೆ ಬಂದ ಆಕ್ಷೇಪಣೆ, ಸಲಹೆಗಳನ್ನು ಪರಿಶೀಲಿಸಿ, ಕರಡು ನಿಯಮಗಳಲ್ಲಿ ಯಾವುದೇ ಬದಲಾವಣೆ ಮಾಡದೇ ಇದ್ದರೆ ಮತ್ತೊಮ್ಮೆ ಸಚಿವ ಸಂಪುಟ ಸಭೆಗೆ ಮಂಡಿಸದೆ ‌ನಿಯಮ ಅಂತಿಮಗೊಳಿಸಲು ಕೂಡಾ ಸಭೆ ಒಪ್ಪಿಗೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.