ಬಿ.ಆರ್.ನಾಗರಾಜಪ್ಪ
ತುಮಕೂರು: ನಗರದ ಖಾಸಗಿ ಹೋಟೆಲ್‌ನಲ್ಲಿ ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಬಿ.ಆರ್.ನಾಗರಾಜಪ್ಪ (58) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜುಲೈ 1ರಂದು ಹೋಟೆಲ್‌ನಲ್ಲಿ ಕೊಠಡಿ ಪಡೆದಿದ್ದರು. ಭಾನುವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಹೋಟೆಲ್ ಕೋಣೆಯಿಂದ ವಾಸನೆ ಹೆಚ್ಚಿದ್ದು, ಸಿಬ್ಬಂದಿ ಹೋಗಿ ನೋಡಿದಾಗ ಆತ್ಮಹತ್ಯೆ ವಿಚಾರ ಗೊತ್ತಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೊಠಡಿಯಲ್ಲಿ ಡೆತ್‌ನೋಟ್ ಸಿಕ್ಕಿದ್ದು, ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಉಲ್ಲೇಖಿಸಿದ್ದಾರೆ.
ಜೂನ್ 30 ರಂದು ಮನೆಯಿಂದ ಹೊರ ಬಂದಿದ್ದರು. ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಜುಲೈ 2ರಂದು ಕೆ.ಟಿ.ಜಿ ನಗರ ಪೊಲೀಸ್ ಠಾಣೆಯಲ್ಲಿ ಕಾಣೆ ಪ್ರಕರಣ ದಾಖಲಾಗಿತ್ತು. ನಾಗರಾಜಪ್ಪ 1993ರಲ್ಲಿ ಕಾನ್‌ಸ್ಟೇಬಲ್ ಆಗಿ ಪೊಲೀಸ್ ಇಲಾಖೆ ಸೇರಿದ್ದರು. ನಂತರ ಬಡ್ತಿ ಪಡೆದು ಈಗ ಇನ್‌ಸ್ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.