ಮಸ್ಕಿ: ಕಂಪ್ಲಿಯಲ್ಲಿ ಶಾಸಕ ಗಣೇಶ ತೊಡೆ ತಟ್ಟಿರುವ ಬಗ್ಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಅರಣ್ಯ ಸಚಿವ ಆನಂದ ಸಿಂಗ್ ಹೇಳಿದರು.
ಪಟ್ಟಣದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಪೂರ್ವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
‘ಕಂಪ್ಲಿಯನ್ನು ಬಳ್ಳಾರಿಗೆ ಸೇರಿಸಬೇಕು ಎಂದು ಹೋರಾಟ ಮಾಡುವ ಹಕ್ಕು ಎಲ್ಲರಿಗೂ ಇದೆ. ಈ ಬಗ್ಗೆ ಮುಖ್ಯಮಂತ್ರಿ ಅವರು ಕಾನೂನಾತ್ಮಕ ಕ್ರಮಗಳೊಂದಿಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಆದರೆ, ಪ್ರತಿಭಟನೆ ಸಂದರ್ಭದಲ್ಲಿ ಶಾಸಕ ಗಣೇಶ ತೊಡೆ ತಟ್ಟಿರುವುದು ಸಭ್ಯತೆ ಅಲ್ಲ. ಈ ಬಗ್ಗೆ ಪೊಲೀಸರು ಏನೂ ಕ್ರಮ ಕೈಗೊಳ್ಳಬೇಕು ಅದನ್ನು ಕೈಗೊಳ್ಳುತ್ತಾರೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.