ADVERTISEMENT

ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಗೆ ನೀತಿ ಪೂರಕ: ಥಾವರಚಂದ್ ಗೆಹಲೋತ್

ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಭಿಮತ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 19:57 IST
Last Updated 16 ಸೆಪ್ಟೆಂಬರ್ 2021, 19:57 IST
ವಿದ್ಯಾಶಿಲ್ಪ ವಿಶ್ವವಿದ್ಯಾಲಯ ನಗರದಲ್ಲಿ ಗುರುವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಅವರು ವಿಶ್ವವಿದ್ಯಾಲಯದ ಕೈಪಿಡಿ ಬಿಡುಗಡೆ ಮಾಡಿದರು. (ಎಡದಿಂದ) ಪಿ. ದಯಾನಂದ ಪೈ, ಥಾವರಚಂದ್ ಗೆಹಲೋತ್ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಬಿ. ತಿಮ್ಮೇಗೌಡ ಇದ್ದರು - – ಪ್ರಜಾವಾಣಿ ಚಿತ್ರ
ವಿದ್ಯಾಶಿಲ್ಪ ವಿಶ್ವವಿದ್ಯಾಲಯ ನಗರದಲ್ಲಿ ಗುರುವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಅವರು ವಿಶ್ವವಿದ್ಯಾಲಯದ ಕೈಪಿಡಿ ಬಿಡುಗಡೆ ಮಾಡಿದರು. (ಎಡದಿಂದ) ಪಿ. ದಯಾನಂದ ಪೈ, ಥಾವರಚಂದ್ ಗೆಹಲೋತ್ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಬಿ. ತಿಮ್ಮೇಗೌಡ ಇದ್ದರು - – ಪ್ರಜಾವಾಣಿ ಚಿತ್ರ   

ಬೆಂಗಳೂರು:‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳು ಆಗಲಿವೆ’ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ತಿಳಿಸಿದರು.

ವಿದ್ಯಾಶಿಲ್ಪ ಶಿಕ್ಷಣ ಸಮೂಹ ನಗರದಲ್ಲಿ ಗುರುವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ವಿದ್ಯಾಶಿಲ್ಪ ವಿಶ್ವವಿದ್ಯಾಲಯವನ್ನು ಉದ್ಘಾಟಿಸಿ, ಮಾತನಾಡಿದರು.‘ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿಯಾಗಲಿದೆ. ಸಾಂಪ್ರದಾಯಿಕ ಶಿಕ್ಷಣದ ಜೊತೆಗೆ ಪ್ರಾಯೋಗಿಕ ಶಿಕ್ಷಣಕ್ಕೂ ಆದ್ಯತೆ ನೀಡಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ಬಹು ಕೌಶಲ್ಯಗಳನ್ನು ಬೆಳಸಿಕೊಳ್ಳಬಹುದಾಗಿದೆ’ ಎಂದು ಹೇಳಿದರು.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ‘ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವೃತ್ತಿಪರ ಶಿಕ್ಷಣ ಬೋಧನೆ ಮಾಡಲು ಅವಕಾಶ ಮಾಡಿಕೊಟ್ಟ ದೇಶದ ಮೊದಲ ರಾಜ್ಯ ಕರ್ನಾಟಕ. ಸರ್ಕಾರಿ ಸಂಸ್ಥೆಗಳ ಜೊತೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳೂ ಗುಣಮಟ್ಟದ ಶಿಕ್ಷಣಕ್ಕೆ ದೊಡ್ಡ ಕೊಡುಗೆ ನೀಡುತ್ತಿವೆ. ಹಾಗಾಗಿ, ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಸಬಲೀಕರಣ ಮಾಡುತ್ತಲೇ ಗುಣಮಟ್ಟದ ಶಿಕ್ಷಣಕ್ಕೂ ಸರ್ಕಾರ ಗಣನೀಯ ಪ್ರೋತ್ಸಾಹ ನೀಡುತ್ತಿದೆ’ ಎಂದರು.

ADVERTISEMENT

ವಿಶ್ವವಿದ್ಯಾಲಯದ ಕುಲಪತಿಪಿ. ದಯಾನಂದ ಪೈ, ‘ಮುಂದಿನ ಪೀಳಿಗೆಯ ನಾಯಕರನ್ನು ನಿರ್ಮಿಸಲು ವಿ.ವಿ. ಶ್ರಮಿಸಲಿದೆ. ಪಠ್ಯದ ಜೊತೆಗೆ ಸಂಶೋಧನೆಗೆ ಕೂಡ ಆದ್ಯತೆ ನೀಡಲಾಗುತ್ತದೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಯೋಜನೆಗಳನ್ನು ರೂಪಿಸಲಾಗುತ್ತಿದ್ದು, ಐದು ವರ್ಷಗಳಲ್ಲಿ ₹ 600 ಕೋಟಿ ಹೂಡಿಕೆ ಮಾಡಲಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.