ಮಸ್ಕಿ (ರಾಯಚೂರು ಜಿಲ್ಲೆ): ‘ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಅಂಗೀಕಾರವಾದ ಬಳಿಕ ನನ್ನ ಮುಂದಿನ ನಡೆಯ ಬಗ್ಗೆ ಹೇಳುತ್ತೇನೆ. ಮುಂಬೈನಿಂದ ಎರಡು ದಿನಗಳಲ್ಲಿ ಬೆಂಗಳೂರಿಗೆ ಬರುತ್ತೇವೆ’ ಎಂದುಶಾಸಕ ಪ್ರತಾಪಗೌಡ ಪಾಟೀಲ ಬುಧವಾರ ಹೇಳಿದರು.
ದೂರವಾಣಿ ಮೂಲಕ ‘ಪ್ರಜಾವಾಣಿ’ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ‘ದೋಸ್ತಿ ಸರ್ಕಾರ ಬೀಳಿಸಲಿಕ್ಕಾಗಿ ನಾವೆಲ್ಲ ರಾಜೀನಾಮೆ ನೀಡಿದ್ದೇವೆ. ಆದರೆ, ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕು ಎನ್ನುವ ಉದ್ದೇಶ ನಮ್ಮ ರಾಜೀನಾಮೆ ಹಿಂದೆ ಇರಲಿಲ್ಲ. ಈಗ ಸರ್ಕಾರ ಪತನವಾಗಿದ್ದು, ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿದ್ದಾರೆ’ ಎಂದು ಹೇಳಿಕೊಂಡರು.
‘ಕಾಂಗ್ರೆಸ್‌ನಲ್ಲಿ ಗೌರವ ಸಿಗದ ಕಾರಣ ನಾವೆಲ್ಲ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಇಲ್ಲಿ ನಮ್ಮ ಕ್ಷೇತ್ರಕ್ಕೆ ಅನುದಾನದ ಪ್ರಶ್ನೆ ಉದ್ಭವಿಸುವುದಿಲ್ಲ. ಸರ್ಕಾರದಿಂದ ನಮಗೆ ಅನ್ಯಾಯವೂ ಆಗಿಲ್ಲ’ ಎಂದು ಅವರು ದ್ವಂದ್ವ ಹೇಳಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.