ADVERTISEMENT

ಸದಸ್ಯತ್ವ ನೋಂದಣಿಗೆ ಕಾಂಗ್ರೆಸ್ ಫ್ರಿಡ್ಜ್‌, ಟಿವಿ, ಮೊಬೈಲ್‌ ಆಮಿಷ –ಬಿಜೆಪಿ ಆರೋಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಮಾರ್ಚ್ 2022, 8:13 IST
Last Updated 9 ಮಾರ್ಚ್ 2022, 8:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ    

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ನವರು ಸದಸ್ಯತ್ವ ನೋಂದಣಿಗಾಗಿ ಹಲವು ಆಮಿಷಗಳನ್ನು ಒಡ್ಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಬಿಜೆಪಿ, ‘ಒಂದು ರಾಷ್ಟ್ರೀಯ ಪಕ್ಷ ಎಷ್ಟು ಅಧೋಗತಿಗೆ ತಲುಪಿದೆ ಎಂದರೆ ಸದಸ್ಯರ ನೋಂದಣಿಗೂ ಆಮಿಷ ಒಡ್ಡುತ್ತಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಶಾಸಕರಾಗಿರುವ ಬಾದಾಮಿ ಕ್ಷೇತ್ರದಲ್ಲಿ ಹೆಚ್ಚು ಸದಸ್ಯತ್ವ ಮಾಡುವವರಿಗೆ ಫ್ರಿಡ್ಜ್‌, ಟಿವಿ, ಮೊಬೈಲ್‌ ಆಮಿಷ ಒಡ್ಡಲಾಗುತ್ತಿದೆ’ ಎಂದು ಟೀಕಿಸಿದೆ.

ಕಾಂಗ್ರೆಸ್‌ ಮುಳುಗುತ್ತಿರುವ ಹಡಗು ಎನ್ನುವುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ADVERTISEMENT

ಮಾ.31ರಂದು ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ ಕೊನೆಗೊಳ್ಳಲಿದೆ. ಅಷ್ಟರೊಳಗೆ ಸದಸ್ಯರಾಗುವವರಿಗೆ ಮಾತ್ರ ಮುಂಬರುವ ಪಕ್ಷದ ಆಂತರಿಕ ಚುನಾವಣೆಗಳಲ್ಲಿ ಮತ ಚಲಾಯಿಸುವ ಅವಕಾಶ ಸಿಗಲಿದೆ ಎಂದು ಕಾಂಗ್ರೆಸ್ ತಿಳಿಸಿದೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.