ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ವಿ. ಪೊನ್ನುರಾಜ್ ಅವರನ್ನು ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಅವರ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರ ಕಾರ್ಯದರ್ಶಿಯಾಗಿದ್ದ ಸೆಲ್ವಕುಮಾರ್ ಜಾಗಕ್ಕೆ ಪೊನ್ನುರಾಜ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ:ಎಚ್.ಡಿ. ದೇವೇಗೌಡರನ್ನು ಭೇಟಿಯಾದ ಮುಖ್ಯಮಂತ್ರಿ ಬೊಮ್ಮಾಯಿ
ಸೆಲ್ವಕುಮಾರ್ ಅವರನ್ನು ಕೌಶಲಾಭಿವೃದ್ದಿ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಪೊನ್ನುರಾಜ್ ಅವರು ಕೆಪಿಸಿಎಲ್ ಆಡಳಿತ ವ್ಯವಸ್ಥಾಪಕ ಹುದ್ದೆಯನ್ನೂ ನಿರ್ವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.