
ಪ್ರಜಾವಾಣಿ ವಾರ್ತೆಸಿದ್ದರಾಮಯ್ಯ, ಮುಖ್ಯಮಂತ್ರಿ
-ಪ್ರಜಾವಾಣಿ ಚಿತ್ರ
ಹಾವೇರಿ: ‘ಪದೇ ಪದೇ ಕೇಳಬೇಡಿ. ಹೈಕಮಾಂಡ್ ಹೇಳಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಶನಿವಾರ ಆಯೋಜಿಸಿದ್ದ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಬಂದಿದ್ದ ವೇಳೆ ಅಧಿಕಾರ ಹಂಚಿಕೆ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಾನು ಈ ಬಗ್ಗೆ ಮಾತಾಡಲ್ಲ ಎಂದು ಹೇಳಿದ್ದೇನೆ. ಆದರೂ ಏಕೆ ಪದೇ ಪದೇ ಕೇಳುತ್ತೀರಾ’ ಎಂದು ಗರಂ ಆದರು.
‘ಶ್ರಮಕ್ಕೆ ಫಲ ಸಿಗುತ್ತೆ ಎಂದು ಡಿ.ಕೆ. ಶಿವಕುಮಾರ ಮಾಡಿರುವ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಹೈಕಮಾಂಡ್ ಟ್ವೀಟ್ ಮಾಡಿದೆಯಾ’ ಎಂದು ಪ್ರಶ್ನಿಸಿದರು. ಸಮಾವೇಶಕ್ಕೆ ಬಂದಿದ್ದ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.