ADVERTISEMENT

ಪಿಪಿಇ ಕಿಟ್ ವೈಜ್ಞಾನಿಕ ವಿಲೇವಾರಿಗೆ ಸಚಿವ ಶ್ರೀರಾಮುಲು ತಾಕೀತು

​ಪ್ರಜಾವಾಣಿ ವಾರ್ತೆ
Published 1 ಜುಲೈ 2020, 13:32 IST
Last Updated 1 ಜುಲೈ 2020, 13:32 IST
ಆರೋಗ್ಯ ಸಚಿವ ಶ್ರೀರಾಮುಲು
ಆರೋಗ್ಯ ಸಚಿವ ಶ್ರೀರಾಮುಲು   

ಬೆಂಗಳೂರು: ಕೋವಿಡ್ ಸೋಂಕಿತರ ಚಿಕಿತ್ಸೆಗೆ ಬಳಸುವ ಪಿಪಿಇ ಕಿಟ್‌ಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ತಾಕೀತು ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಿಟ್‌ಗಳನ್ನುಎಲ್ಲೆಂದರಲ್ಲಿ ಬಿಸಾಕುತ್ತಿರುವುದು ಕಂಡುಬಂದರೆ, ಅಂಥವರ ವಿರುದ್ಧ ಮುಲಾಜಿಲ್ಲದೇ ಅತ್ಯಂತ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

'ಯಾರೋ ಕೆಲವರ ನಿರ್ಲಕ್ಷ್ಯ ಜನಸಾಮಾನ್ಯರ ಪ್ರಾಣಕ್ಕೆ ಕಂಟಕವಾಗಬಾರದು. ಸಂಬಂಧಿಸಿದ ಅಧಿಕಾರಿಗಳೇ ಇದಕ್ಕೆ ಹೊಣೆಗಾರರು' ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.