ADVERTISEMENT

ರಾಷ್ಟ್ರೀಯ ಹೆದ್ದಾರಿಯಾಗಿ ರಾಜ್ಯ ಹೆದ್ದಾರಿ: ಗಡ್ಕರಿಗೆ ಪ್ರಭಾ ಮನವಿ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2024, 16:04 IST
Last Updated 8 ಆಗಸ್ಟ್ 2024, 16:04 IST
ನಿತಿನ್‌ ಗಡ್ಕರಿ ಅವರಿಗೆ ಡಾ. ಪ್ರಭಾ ಮಲ್ಲಿಕಾರ್ಜುನ್‌ ಮನವಿ ಸಲ್ಲಿಸಿದರು. 
ನಿತಿನ್‌ ಗಡ್ಕರಿ ಅವರಿಗೆ ಡಾ. ಪ್ರಭಾ ಮಲ್ಲಿಕಾರ್ಜುನ್‌ ಮನವಿ ಸಲ್ಲಿಸಿದರು.    

ನವದೆಹಲಿ: ಮರಿಯಮ್ಮನಹಳ್ಳಿ, ಹರಪ್ಪನಹಳ್ಳಿ, ಹರಿಹರ, ಮಲೆಬೆನ್ನೂರು, ಹೊನ್ನಾಳಿ, ಶಿವಮೊಗ್ಗ ನಡುವಿನ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಗೆ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಮನವಿ ಮಾಡಿದರು. 

ಗುರುವಾರ ಇಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಅವರು, ‘ಇದು ಬಹುಕಾಲದ ಬೇಡಿಕೆ. ರಾಜ್ಯ ಸರ್ಕಾರ ಹಲವು ಸಲ ಮನವಿ ಸಲ್ಲಿಸಿದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಕೋರಿದರು. 

‘ಮೂಡಿಗೆರೆ– ಹೊಳಲ್ಕೆರೆ ನಡುವೆ ರಾಷ್ಟ್ರೀಯ ಹೆದ್ದಾರಿ 73 ಅನ್ನು ಅನಗೋಡು ತನಕ ಮೇಲ್ದರ್ಜೆಗೆ ಏರಿಸಬೇಕು. ಈ ಹೆದ್ದಾರಿ 146 ಕಿ.ಮೀ ಇದೆ. ಹೊಳಲ್ಕೆರೆಯಿಂದ ಅನಗೋಡು ನಡುವಿನ 46 ಕಿ.ಮೀ.ಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಘೋಷಿಸಿಲ್ಲ. ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು’ ಎಂದು ಅವರು ಮನವಿ ಮಾಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.