ಬೆಂಗಳೂರು: ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ.ನಾವದಗಿ ಅವರನ್ನು ರಾಜ್ಯದ ನೂತನ ಅಡ್ವೊಕೇಟ್ ಜನರಲ್ (ಎ.ಜಿ) ಆಗಿ ನೇಮಿಸಿ ರಾಜ್ಯಪಾಲ ವಜುಭಾಯಿ ವಾಲಾ ಶನಿವಾರ ಆದೇಶ ಹೊರಡಿಸಿದ್ದಾರೆ.
ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೆ, ಹಾಲಿ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.