ADVERTISEMENT

ಕೆಪಿಎಸ್‌ಸಿ ಸದಸ್ಯರಾಗಿ ಪ್ರಭುದೇವ್‌ ನೇಮಕ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2021, 21:34 IST
Last Updated 8 ಏಪ್ರಿಲ್ 2021, 21:34 IST
ಪ್ರಭುದೇವ್‌
ಪ್ರಭುದೇವ್‌   

ಬೆಂಗಳೂರು: ಕೌಶಲಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಯ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪ್ರಭುದೇವ್ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಸದಸ್ಯರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ನೆಲಮನೆ ಗ್ರಾಮದ ಪ್ರಭುದೇವ್‌, ಪಾಂಡವಪುರದಲ್ಲಿ ಪ್ರಾಥಮಿಕ ಶಿಕ್ಷಣ, ಮೈಸೂರಿನ ಮರಿಮಲ್ಲಪ್ಪ ಶಾಲೆಯಲ್ಲಿ ಪ್ರೌಢ ಶಿಕ್ಷಣ, ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಬಿ.ಇ. ಪದವಿ, ಮೈಸೂರು ವಿವಿಯಲ್ಲಿ ವ್ಯವಹಾರ ಆಡಳಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ, ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಪಿಎಚ್‍ಡಿ ಪಡೆದರು.

ವಾಣಿಜ್ಯ ತೆರಿಗೆ ಅಧಿಕಾರಿಯಾಗಿ, ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ಕರಕುಶಲ ಅಭಿವೃದ್ಧಿ ನಿಗಮ, ಹಟ್ಟಿ ಚಿನ್ನದ ಗಣಿ ನಿಗಮಗಳಲ್ಲಿ ಪ್ರಧಾನ ವ್ಯವಸ್ಥಾಪಕರಾಗಿ ಕರ್ತವ್ಯ ಸಲ್ಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.