ADVERTISEMENT

ರೇಣುಕಸ್ವಾಮಿ ಕೊಲೆ ಪ್ರಕರಣ: ಪ್ರದೋಷ್‌ಗೆ ಮಧ್ಯಂತರ ಜಾಮೀನು

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2025, 20:42 IST
Last Updated 25 ಅಕ್ಟೋಬರ್ 2025, 20:42 IST
ಕೊಲೆಯಾದ ರೇಣುಕಸ್ವಾಮಿ 
ಕೊಲೆಯಾದ ರೇಣುಕಸ್ವಾಮಿ    

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ಇರುವ ಆರೋಪಿ ಪ್ರದೋಷ್ ಅವರಿಗೆ 57ನೇ ಸಿಸಿಎಚ್‌ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಪ್ರದೋಷ್ ಅವರ ತಂದೆ ಸುಬ್ಬರಾವ್ ಅವರು ನಿಧನರಾಗಿದ್ದು, ಅಂತ್ಯಸಂಸ್ಕಾರ ಹಾಗೂ ಇತರೆ ಕಾರ್ಯಗಳನ್ನು ಮುಗಿಸಲು ಪ್ರದೋಷ್ ಅವರಿಗೆ ಮಧ್ಯಂತರ ಜಾಮೀನು ನೀಡುವಂತೆ ಕೋರಿ ಅವರ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಗಣಿಸಿದ ಕೋರ್ಟ್‌ 20 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT