ನವದೆಹಲಿ: ಅಧಿಕಾರಿಗಳಿಂದ ಲಂಚ ಕೇಳಿರುವ ಕೃಷಿ ಸಚಿವ ಚಲುರಾಯಸ್ವಾಮಿ ಅವರಿಂದ ಸಚಿವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಪಡೆಯಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.
ಶುಕ್ರವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಮೇಲೆ ಆರೋಪ ಬಂದ ಕೂಡಲೇ ನಾವು ರಾಜೀನಾಮೆ ಪಡೆದಿದ್ದೆವು. ಚಲುವರಾಯಸ್ವಾಮಿ ಗಂಭೀರ ಸ್ವರೂಪದ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣದ ಸಮಗ್ರ ತನಿಖೆಗೆ ವಿಶೇಷ ತನಿಖಾ ದಳ ರಚಿಸಬೇಕು ಅಥವಾ ಪ್ರಕರಣವನ್ನು ಲೋಕಾಯುಕ್ತಕ್ಕೆ ಒಪ್ಪಿಸಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.