ADVERTISEMENT

ಡಿಕೆಶಿಗೆ ಸಮನ್ಸ್| ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದ ಪ್ರಹ್ಲಾದ ಜೋಶಿ

‘ಎಚ್‌ಡಿಕೆ ಮಲೇಷ್ಯಾಕ್ಕೆ ತೆರಳಿ ಮಜಾ ಮಾಡುತ್ತಿದ್ದಾರೆ ಎಂಬ ವರದಿ ನಿಜವಾಗಿದ್ದರೆ ದುರ್ದೈವ’

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2019, 10:26 IST
Last Updated 30 ಆಗಸ್ಟ್ 2019, 10:26 IST
   

ಹುಬ್ಬಳ್ಳಿ: ಡಿ.ಕೆ. ಶಿವಕುಮಾರ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿದ್ದ ವಿಚಾರವನ್ನು ಅವರು ರಾಜಕೀಯ ಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಇದರಲ್ಲಿ ಬಿಜೆಪಿಯ ಹಾಗೂ ಕೇಂದ್ರ ಸರ್ಕಾರದ ಪಾತ್ರ ಏನೂ ಇಲ್ಲ; ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಶಿವಕುಮಾರ್ ವಿನಾಕಾರಣ ಕೇಂದ್ರದ ಮೇಲೆ ಗೂಬೆ ಕೂಡಿಸುತ್ತಿದ್ದಾರೆ. ಇ.ಡಿ. ಮುಂದೆ ಹಾಜರಾಗಲು ಅವರಿಗೆ ಏನು ಸಮಸ್ಯೆ; ಅವರ ಬಳಿ ಅಷ್ಟೊಂದು ಹಣ ಎಲ್ಲಿಂದ ಬಂತು, ಅವರು ಏನು ಮಾಡುತ್ತಿದ್ದಾರೆ ಎಂಬುದು ಎಲ್ಲರೂ ನೋಡುತ್ತಿದ್ದಾರೆ’ ಎಂದರು.

‘ಅಧಿಕಾರ ಇದ್ದಾಗ ಜನರ ಬಳಿಗೆ, ಅಧಿಕಾರ ಹೋದಾಗ ಮಜಾ’

ADVERTISEMENT

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮಲೇಷ್ಯಾಕ್ಕೆ ತೆರಳಿ ಮಜಾ ಮಾಡುತ್ತಿದ್ದಾರೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ನಿಜವೇ ಆಗಿದ್ದರೆ ದುರ್ದೈವ ಎಂದರು.

‘ರಾಜ್ಯದಲ್ಲಿ ನೆರೆ ಪರಿಸ್ಥಿತಿಯಿದೆ. ಜನ ಸಂಕಷ್ಟದಲ್ಲಿದ್ದಾರೆ. ಅಧಿಕಾರದಲ್ಲಿದ್ದಾಗ ಜನರ ಬಳಿ ಹೋದವರು, ಅಧಿಕಾರ ಹೋದ ತಕ್ಷಣ ಮಜಾ ಮಾಡಲು ಹೋಗಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.