ADVERTISEMENT

ಹುಬ್ಬಳ್ಳಿ ರೈಲ್ವೆ ನಿಲ್ದಾಣ ಮೇಲ್ದರ್ಜೆ: ವೈಷ್ಣವ್‌ಗೆ ಪ್ರಲ್ಹಾದ ಜೋಶಿ ಮನವಿ

​ಪ್ರಜಾವಾಣಿ ವಾರ್ತೆ
Published 30 ಜುಲೈ 2025, 14:03 IST
Last Updated 30 ಜುಲೈ 2025, 14:03 IST
ಅಶ್ವಿನಿ ವೈಷ್ಣವ್‌ ಅವರಿಗೆ ಪ್ರಲ್ಹಾದ ಜೋಶಿ ಮನವಿ ಸಲ್ಲಿಸಿದರು. ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಇದ್ದರು. 
ಅಶ್ವಿನಿ ವೈಷ್ಣವ್‌ ಅವರಿಗೆ ಪ್ರಲ್ಹಾದ ಜೋಶಿ ಮನವಿ ಸಲ್ಲಿಸಿದರು. ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಇದ್ದರು.    

ನವದೆಹಲಿ: ಹುಬ್ಬಳ್ಳಿಯ ರೈಲು ನಿಲ್ದಾಣವನ್ನು ಅಂತರರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣದ ಮಟ್ಟಕ್ಕೆ ಪರಿವರ್ತಿಸಬೇಕು ಎಂದು ಒತ್ತಾಯಿಸಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಆಹಾರ ಸಚಿವ ಪ್ರಲ್ಹಾದ ಜೋಶಿ ಬುಧವಾರ ಮನವಿ ಮಾಡಿದರು. 

‘ಬೆಂಗಳೂರು ರೈಲು ನಿಲ್ದಾಣ ಹೊರತು ಪಡಿಸಿದರೆ, ಹುಬ್ಬಳ್ಳಿ ರೈಲು ನಿಲ್ದಾಣ ಅತ್ಯಂತ ಜನನಿಬಿಡ ನಿಲ್ದಾಣವಾಗಿ ಗುರುತಿಸಿಕೊಂಡಿದ್ದು, ನಿತ್ಯ 50 ಸಾವಿರಕ್ಕೂ ಹೆಚ್ಚು ಜನರು ಸಂಚರಿಸುತ್ತಾರೆ. ನೈರುತ್ಯ ರೈಲ್ವೆ ವಲಯದ ಮುಖ್ಯ ಕಚೇರಿ ಹೊಂದಿರುವ ಹುಬ್ಬಳ್ಳಿ ನಿಲ್ದಾಣವು ಭಾರತೀಯ ರೈಲ್ವೆಯಲ್ಲಿ ತನ್ನದೇ ಆದ ಮಹತ್ವ ಹೊಂದಿರುವುದರಿಂದ ಹುಬ್ಬಳ್ಳಿ ರೈಲ್ವೆ ನಿಲ್ದಾಣವನ್ನು ಅಂತರರಾಷ್ಟ್ರೀಯ ದರ್ಜೆಗೆ ಪರಿವರ್ತಿಸುವುದು ಅವಶ್ಯ ಎಂದು ಅವರು ಕೋರಿದರು. 

ಹುಬ್ಬಳ್ಳಿಯಲ್ಲಿ ಆಧಾರ್ ಸೇವಾ ಕೇಂದ್ರ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.