ADVERTISEMENT

ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ 15ರಂದು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2021, 19:07 IST
Last Updated 13 ಫೆಬ್ರುವರಿ 2021, 19:07 IST

ಬೆಂಗಳೂರು: ಕಲ್ಯಾಣ ಕರ್ನಾಟಕದ ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಇದೇ 15ರಂದು ಶಾಲೆಗಳನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ರಾಜ್ಯ ಸರ್ಕಾರ 1995ರಿಂದ 2015ರವರೆಗಿನ ಎಲ್ಲ ಕನ್ನಡ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸಬೇಕು, 371ಜೆ ಜಾರಿಯಾದ ದಿನದಿಂದ ಇಲ್ಲಿಯವರೆಗೆ ಬಳಕೆಯಾಗದೆ ಉಳಿದಿರುವ ನಿಧಿಯನ್ನು ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಏಳಿಗೆಗಾಗಿ ಶೈಕ್ಷಣಿಕ ನಿಧಿಯೆಂದು ಘೋಷಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ ಎಂದು ಕಲ್ಯಾಣ ಕರ್ನಾಟಕದ ವಿಭಾಗೀಯ ಅಧ್ಯಕ್ಷ ಸುನಿಲ್ ಹುಡುಗಿ ಹೇಳಿದರು.

‘ನಮ್ಮ ಬೇಡಿಕೆಗಳಿಗೆ ಸರ್ಕಾರ ಮತ್ತು ಶಿಕ್ಷಣ ಸಚಿವರು ಸ್ಪಂದಿಸದೆ ಮೌನ ತಾಳಿದ್ದಾರೆ. ಹೀಗಾಗಿ, ಎಲ್ಲ ಕನ್ನಡ ಮಾಧ್ಯಮ ಶಾಲೆಗಳನ್ನು ಒಂದು ದಿನ ಸಾಂಕೇತಿಕವಾಗಿ ಬಂದ್ ಮಾಡಲು ತೀರ್ಮಾನಿಸಿದ್ದೇವೆ ಎಂದೂ ಅವರು ತಿಳಿಸಿದರು.

ADVERTISEMENT

‘ಕಲ್ಯಾಣ ಕರ್ನಾಟಕದ ಇಂಗ್ಲಿಷ್ ಮಾಧ್ಯಮ ಶಾಲೆಗಳು ಪ್ರತಿಭಟನೆಗೆ ಬೆಂಬಲ ನೀಡಿವೆ. ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ಸ್ವರೂಪದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.