ADVERTISEMENT

'ಪ್ರಜಾವಾಣಿ’ ವರದಿ ಪರಿಣಾಮ: ಬಿಎಸ್ಸಿ ನರ್ಸಿಂಗ್ ಅಧಿಸೂಚನೆ ಹಿಂದಕ್ಕೆ

'ಪ್ರಜಾವಾಣಿ’ ವರದಿ ಪರಿಣಾಮ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2021, 17:30 IST
Last Updated 10 ಫೆಬ್ರುವರಿ 2021, 17:30 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಬಿಎಸ್ಸಿ ನರ್ಸಿಂಗ್‌ ಕೋರ್ಸ್‌ಗಳ ಸರ್ಕಾರಿ ಕೋಟಾದ ವಿದ್ಯಾರ್ಥಿಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಇದೇ 4 ರಂದು
ಹೊರಡಿಸಿದ್ದ ಅಧಿಸೂಚನೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಹಿಂದಕ್ಕೆ ಪಡೆದಿದೆ.

ಅಧಿಸೂಚನೆ ಹೊರಡಿಸಿ ಐದು ದಿನ ಕಳೆದರೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರವೇಶಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ಹಾಕಿರಲಿಲ್ಲ. ಅರ್ಜಿ ಸಲ್ಲಿಸಲು ಸಾಧ್ಯವಾಗದೇ ರಾಜ್ಯದಾದ್ಯಂತ ಸಾವಿರಾರು ವಿದ್ಯಾರ್ಥಿಗಳು ಆತಂಕಕ್ಕೆ ಒಳ
ಗಾಗಿದ್ದರು. ‘ಪ್ರಜಾವಾಣಿ’ ಈ ಕುರಿತು ಬುಧವಾರ ವಿಸ್ತೃತವಾಗಿ ವರದಿ ಮಾಡಿತ್ತು.

ADVERTISEMENT

ತಕ್ಷಣವೇ ಇದಕ್ಕೆ ಸ್ಪಂದಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ತಾಂತ್ರಿಕ ಕಾರಣಗಳಿಂದ ಫೆ.4 ಅಧಿಸೂಚನೆ ಹಿಂದಕ್ಕೆ ಪಡೆದಿದ್ದು, ಪರಿಷ್ಕೃತ ಅಧಿಸೂಚನೆ ಹೊರಡಿಸುವುದಾಗಿ ತಿಳಿಸಿದೆ. ವಿದ್ಯಾರ್ಥಿಗಳು ಇದನ್ನು ಸ್ವಾಗತಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.