ADVERTISEMENT

Live | ಕೌಟುಂಬಿಕ ದೌರ್ಜನ್ಯದ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷರ ಜೊತೆ ಮಾತನಾಡಿ

ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30ರವರೆಗೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2020, 5:40 IST
Last Updated 27 ಏಪ್ರಿಲ್ 2020, 5:40 IST
ಪ್ರಮೀಳಾ ನಾಯ್ಡು
ಪ್ರಮೀಳಾ ನಾಯ್ಡು   

ಬೆಂಗಳೂರು: ಕೌಟುಂಬಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಅಹವಾಲುಗಳನ್ನು ಆಲಿಸಲು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್‌.ಪ್ರಮೀಳಾ ನಾಯ್ಡು ಅವರು ನಿಮ್ಮೊಂದಿಗೆ ಪ್ರಜಾವಾಣಿ ಫೋನ್‌–ಇನ್‌ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.

ಇಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30ರವರೆಗೆನಡೆಯುವ ಕಾರ್ಯಕ್ರಮವು ಪ್ರಜಾವಾಣಿ ಫೇಸ್‌ಬುಕ್‌ ಪುಟದಲ್ಲಿ ಲೈವ್‌ ಆಗಲಿದೆ.080 45557230 ದೂರವಾಣಿ ಸಂಖ್ಯೆಗೆ ಕರೆ ಮಾಡಿ, ನಿಮ್ಮ ಸಮಸ್ಯೆ ಹೇಳಿಕೊಳ್ಳಿ.

ಸದ್ಯ ದೇಶದಲ್ಲಿ ಕೋವಿಡ್‌–19 ಸೋಂಕು ಭೀತಿಯಿಂದಾಗಿ ಲಾಕ್‌ಡೌನ್‌ ಜಾರಿಯಲ್ಲಿದೆ. ಈ ಅವಧಿಯಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ವರದಿಗಳು ಪ್ರಸಾರವಾಗಿವೆ. ಇಂತಹವರದಿಗಳ ಕುರಿತಂತೆ ವಿವರಣೆ ನೀಡುವಂತೆಹೈಕೋರ್ಟ್ ಇತ್ತೀಚೆಗೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.ಹಾಗಾಗಿ ಫೋನ್‌–ಇನ್‌ ಕಾರ್ಯಕ್ರಮವೂ ಉಪಕಾರಿಯಾಗಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.