
Top 10 News: ಈ ದಿನದ ಪ್ರಮುಖ ಸುದ್ದಿಗಳು– ಆಗಸ್ಟ್ 13 ಭಾನುವಾರ 2023

ಜಾತಿ ನಿಂದನೆ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಪ್ರಕಟಿಸಿರುವ ನಟ ಉಪೇಂದ್ರ, ‘ನನ್ನ ಮೇಲೆ ಏಕೆ ಇಷ್ಟೊಂದು ದ್ವೇಷ’ ಎಂದು ಪ್ರಶ್ನಿಸಿದ್ದಾರೆ.
ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ
ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ನೇರಪ್ರಸಾರದ ವೇಳೆ ಅವಹೇಳನಕಾರಿ ಪದ ಬಳಸಿ ಜಾತಿ ನಿಂದನೆ ಮಾಡಿದ ಆರೋಪದಡಿ ನಟ ಉಪೇಂದ್ರ ವಿರುದ್ಧ ಬೆಂಗಳೂರಿನ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ
ತುಮಕೂರಿನ ಸಿದ್ಧಗಂಗಾ ಮಠದ ಹಿಂಭಾಗದಲ್ಲಿ ಭಾನುವಾರ ಗೋಕಟ್ಟೆಯಲ್ಲಿ (ಕೃಷಿ ಹೊಂಡದ ರೀತಿಯ ಹೊಂಡ) ಬಿದ್ದು ನಾಲ್ವರು ಮೃತಪಟ್ಟಿದ್ದಾರೆ.
ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ‘ಏಮ್ಸ್’ನಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆಯನ್ನೊಳಗೊಂಡಂತೆ ಇಡೀ ದೇಶದ ಆರೋಗ್ಯ ವ್ಯವಸ್ಥೆಯನ್ನು ‘ರೋಗಗ್ರಸ್ತ’ವನ್ನಾಗಿ ಮಾಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ವಾಗ್ದಾಳಿ ನಡೆಸಿದ್ದಾರೆ.
ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ
ಬಿಜೆಪಿ ಸರ್ಕಾರದಿಂದ ದೇಶದ ಆರೋಗ್ಯ ವ್ಯವಸ್ಥೆ ರೋಗಗ್ರಸ್ತ: ಖರ್ಗೆ
ಗಾಲ್ವಾನ್ ಕಣಿವೆಯಲ್ಲಿ ಚೀನಿ ಸೈನಿಕರೊಂದಿಗಿನ ಘರ್ಷಣೆಯ ನಂತರ ಭಾರತೀಯ ವಾಯು ಪಡೆಯು (ಐಎಎಫ್) 68,000ಕ್ಕೂ ಹೆಚ್ಚು ಸೈನಿಕರು, ಸುಮಾರು 90 ಟ್ಯಾಂಕ್‌ಗಳು ಮತ್ತು ಇತರ ಶಸ್ತ್ರಾಸ್ತ್ರ ವ್ಯವಸ್ಥೆಗಳನ್ನು ಪೂರ್ವ ಲಡಾಖ್‌ಗೆ ಅತ್ಯಂತ ಕ್ಷಿಪ್ರಗತಿಯಲ್ಲಿ ಏರ್‌ಲಿಫ್ಟ್ ಮಾಡಿತ್ತು ಎಂದು ರಕ್ಷಣಾ ಮತ್ತು ಭದ್ರತಾ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.
ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ
ಗಾಲ್ವಾನ್ ಘರ್ಷಣೆ ನಂತರ ಲಡಾಖ್‌ಗೆ 68000 ಸೈನಿಕರನ್ನು ಏರ್‌ಲಿಫ್ಟ್ ಮಾಡಿದ್ದ IAF!
ಲಿಂಗಾಯತ ಧರ್ಮದ ಎಲ್ಲ ಒಳಪಂಗಡಗಳನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ಶಿಫಾರಸು ಮಾಡುವಂತೆ ಆಗ್ರಹಿಸಿ ಗದಗ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ
ಕೇಂದ್ರದಲ್ಲಿ ಲಿಂಗಾಯತರನ್ನು ಒಬಿಸಿಗೆ ಸೇರಿಸಲು ಶಿಫಾರಸು ಮಾಡಿ: CMಗೆ ತೋಂಟದ ಶ್ರೀ
ಬರ ಘೋಷಣೆ ಮಾರ್ಗಸೂಚಿಗಳನ್ನು ಪರಿಷ್ಕರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಪತ್ರ ಬರೆದಿದ್ದಾರೆ.
ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ
ಬರ ಘೋಷಣೆ ಮಾರ್ಗಸೂಚಿ ಪರಿಷ್ಕರಣೆಗೆ ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದಾದ್ಯಂತ 'ಹರ್ ಘರ್ ತಿರಂಗಾ' ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಚಿತ್ರವನ್ನು (ಡಿಪಿ) ತ್ರಿವರ್ಣ ಧ್ವಜವಾಗಿ ಬದಲಾಯಿಸಲು ಪ್ರಧಾನಿ ಮೋದಿ, ದೇಶದ ಜನತೆಗೆ ವಿನಂತಿ ಮಾಡಿದ್ದಾರೆ.
ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ
Har Ghar Tiranga | ಪ್ರೊಫೈಲ್ ಚಿತ್ರ ರಾಷ್ಟ್ರಧ್ವಜವಾಗಿ ಬದಲಿಸಲು ಪ್ರಧಾನಿ ಕರೆ
ಹವಾಯಿಯ ಮಾಯಿ ಕೌಂಟಿಯಲ್ಲಿ ಕಾಳ್ಗಿಚ್ಚಿನ ಪರಿಣಾಮ ಈವರೆಗೆ 93 ಜನ ಮೃತಪಟ್ಟಿದ್ದಾರೆ. ‘ಮೃತಪಟ್ಟವರ ಗುರುತು ಪತ್ತೆ ಕಾರ್ಯ ಇನ್ನೂ ಆರಂಭಿಕ ಹಂತದಲ್ಲಿದೆ. ಶ್ವಾನಗಳನ್ನು ಬಳಸಿ ಮೃತದೇಹಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಇಬ್ಬರ ಗುರುತು ಮಾತ್ರ ಪತ್ತೆ ಮಾಡಲಾಗಿದೆ. ಸಿಬ್ಬಂದಿ ಮತ್ತು ಶ್ವಾನ ದಳ ಇಲ್ಲಿಯವರೆಗೆ ಘಟನಾ ಸ್ಥಳದ ಒಟ್ಟು ಪ್ರದೇಶದಲ್ಲಿ ಕೇವಲ ಶೇಕಡ 3ರಷ್ಟು ಭಾಗದಲ್ಲಿ ಹಡುಕಾಟ ನಡೆಸಿವೆ’ ಎಂದು ಮಾಯಿ ಪಟ್ಟಣದ ಪೊಲೀಸ್ ಅಧಿಕಾರಿ ಜಾನ್ ಪಲ್ಲೆಟಿಯರ್ ಮಾಹಿತಿ ನೀಡಿದ್ದಾರೆ.
ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ
‘ಹೆರ್ಸಾನ್ ಪ್ರಾಂತ್ಯದ ಎರಡು ಹಳ್ಳಿಗಳ ಮೇಲೆ ರಷ್ಯಾ ಪಡೆಗಳು ಕ್ಷಿಪಣಿ ದಾಳಿ ನಡೆಸಿದ್ದು, ಮಗು ಸೇರಿ ಏಳು ಮಂದಿ ಮೃತಪಟ್ಟಿದ್ದಾರೆ’ ಎಂದು ಉಕ್ರೇನ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದರು.
ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.