
ಪ್ರಜಾವಾಣಿ ವಾರ್ತೆ
ಬೆಂಗಳೂರು: ವಿದೇಶಕ್ಕೆ ಹೋಗಿರುವ ಪ್ರಜ್ವಲ್ ರೇವಣ್ಣ ಇದುವರೆಗೂ ಅವರ ಕುಟುಂಬದವರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದು ಜೆಡಿಎಸ್ ಪ್ರಮುಖರ ಸಮಿತಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು.
ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ‘ಪ್ರಜ್ವಲ್ ಮಾಹಿತಿ ನನಗೂ ಸೇರಿದಂತೆ ಯಾರಿಗೂ ಇಲ್ಲ. ಆರೋಪ ಕೇಳಿಬಂದ ತಕ್ಷಣ ಪಕ್ಷ ಅವರ ವಿರುದ್ಧ ಕ್ರಮ ಕೈಗೊಂಡಿದೆ. ಈಗ ಏನಿದ್ದರೂ ಸರ್ಕಾರದ ಕೆಲಸ. ಆರೋಪಗಳ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ. ಭಾರತಕ್ಕೆ ಕರೆ ತಂದು ವಿಚಾರಣೆ ನಡೆಸಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.