ADVERTISEMENT

ಪ್ರಜ್ವಲ್‌ ಆಯ್ಕೆ ಅಸಿಂಧು; ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2019, 20:16 IST
Last Updated 30 ಸೆಪ್ಟೆಂಬರ್ 2019, 20:16 IST

ಬೆಂಗಳೂರು: ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ಬಿಜೆಪಿ ಪರಾಜಿತ ಅಭ್ಯರ್ಥಿ ಎ. ಮಂಜು ಹಾಗೂ ವಕೀಲ ಜಿ. ದೇವರಾಜೇಗೌಡ ಸಲ್ಲಿಸಿದ ಪ್ರತ್ಯೇಕ ಚುನಾವಣಾ ತಕರಾರು ಅರ್ಜಿಗಳನ್ನು ನ್ಯಾ. ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಪ್ರಜ್ವಲ್ ರೇವಣ್ಣ ಪರ ವಕೀಲರು, ‘ಅರ್ಜಿಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ಬೇಕು’ ಎಂದು ಕೋರಿದರು. ಅ. 18ರೊಳಗಾಗಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದ ನ್ಯಾಯಪೀಠ, ವಿಚಾರಣೆ ಮುಂದೂಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.