ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಈ ಬಗ್ಗೆ ನಟಿ ರಮ್ಯಾ ಪ್ರತಿಕ್ರಿಯಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಕಟವಾಗುತ್ತಿರುವುದು, 'ಸಂತ್ರಸ್ತ ಮಹಿಳೆಯರಿಗೆ ದೊರೆತ ನ್ಯಾಯ' ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ಅಪರಾಧಿ ಎಂದು ಜನಪ್ರತಿನಿಧಿಗಳ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ನ್ಯಾಯಾಧೀಶ ಸಂತೋಷ ಗಜಾನನ ಭಟ್ ತೀರ್ಪು ಪ್ರಕಟಿಸಿದ್ದಾರೆ. ಶಿಕ್ಷೆಯ ಪ್ರಮಾಣ ನಾಳೆ ಪ್ರಕಟವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.