ADVERTISEMENT

ಪ್ರಜ್ವಲ್‌ ರೇವಣ್ಣ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಲಿ: ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 9 ಜುಲೈ 2025, 16:16 IST
Last Updated 9 ಜುಲೈ 2025, 16:16 IST
ಪ್ರಜ್ವಲ್‌ ರೇವಣ್ಣ
ಪ್ರಜ್ವಲ್‌ ರೇವಣ್ಣ   

ಬೆಂಗಳೂರು: ‘ಮನೆ ಕೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಸುಪ್ರೀಂ ಕೋರ್ಟ್‌ ತೀರ್ಪಿನ ಪ್ರಕಾರ ಮೊದಲಿಗೆ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಬೇಕು. ಈ ಅರ್ಜಿಯ ಬಗ್ಗೆ ವಿಚಾರಣಾ ನ್ಯಾಯಾಲಯ 10 ದಿನಗಳಲ್ಲಿ ಕಾನೂನುಬದ್ಧ ನಿರ್ಣಯ ಕೈಗೊಳ್ಳಬೇಕು’ ಎಂದು ಹೈಕೋರ್ಟ್‌ ನಿರ್ದೇಶಿಸಿದೆ.

ಎರಡನೇ ಬಾರಿಗೆ ನಿಯಮಿತ ಜಾಮೀನು ಕೋರಿ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ಪ್ರಜ್ವಲ್‌ ಪರ ಪದಾಂಕಿತ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವದಗಿ ‘ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರಿಕೆ ಮಂಡಿಸದೆಯೇ ನೇರವಾಗಿ ಹೈಕೋರ್ಟ್‌ಗೆ ಮನವಿ ಸಲ್ಲಿಸಬಹುದು’ ಎಂದು ಪ್ರತಿಪಾದಿಸಿದರು.

ಆದರೆ ಇದನ್ನು ಒಪ್ಪದ ನ್ಯಾಯಪೀಠ ‘ವಿಚಾರಣಾ ನ್ಯಾಯಾಲಯದಲ್ಲಿ ಮೊದಲಿಗೆ ನಿಮ್ಮ ಅರ್ಜಿ ಸಲ್ಲಿಸಿ ನಂತರವೇ ಮುಂದಿನ ಹೆಜ್ಜೆ ನಿರ್ಧರಿಸಿ’ ಎಂದು ಸೂಚಿಸಿ ಅರ್ಜಿ ವಿಲೇವಾರಿ ಮಾಡಿತು. ರಾಜ್ಯ ಸರ್ಕಾರದ ಪರ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್‌.ಜಗದೀಶ್‌ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.