ADVERTISEMENT

ಮಹದಾಯಿ ಯೋಜನೆಗೆ ಪ್ರಸ್ತಾವನೆ ಸಲ್ಲಿಸದ ರಾಜ್ಯ: ಸಂಸದ ಪ್ರಜ್ವಲ್‌ಗೆ ಕೇಂದ್ರ ಉತ್ತರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಜುಲೈ 2021, 12:25 IST
Last Updated 31 ಜುಲೈ 2021, 12:25 IST
ಸಂಸದ ಪ್ರಜ್ವಲ್‌ ರೇವಣ್ಣ
ಸಂಸದ ಪ್ರಜ್ವಲ್‌ ರೇವಣ್ಣ    

ಬೆಂಗಳೂರು: ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಗಳ ವಿಚಾರವಾಗಿ ಕೇಂದ್ರ ಸರ್ಕಾರ ನೀಡಿರುವ ಉತ್ತರದ ಪ್ರತಿಯನ್ನು ಸಂಸದ ಪ್ರಜ್ವಲ್‌ ರೇವಣ್ಣ ಶನಿವಾರ ಟ್ವೀಟ್‌ ಮಾಡಿದ್ದಾರೆ. ಆ ಮೂಲಕ ಕಳಸಾ ಬಂಡೂರಿ ಯೋಜನೆ ಪ್ರಾರಂಭಿಸಲು ರಾಜ್ಯ ಬಿಜೆಪಿ ಸರ್ಕಾರ ಯಾವುದೇ ವಿಶೇಷ ಪ್ರಸ್ತಾವನೆಯನ್ನು ಸಲ್ಲಿಸಿಲ್ಲ ಎಂಬುದನ್ನು ಪ್ರಜ್ವಲ್‌ ಬಹಿರಂಗಪಡಿಸಿದ್ದಾರೆ.

'ಮಹದಾಯಿ ಯೋಜನೆ ವಿಚಾರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದೇನೆ. ಆದರೆ, ರಾಜ್ಯ ಬಿಜೆಪಿ ಸರ್ಕಾರ ಕಳಸಾ ಬಂಡೂರಿ ಯೋಜನೆಯನ್ನು ಪ್ರಾರಂಭಿಸಲು ಯಾವುದೇ ವಿಶೇಷ ಪ್ರಸ್ತಾವನೆಯನ್ನು ಸಲ್ಲಿಸಿಲ್ಲ. ಮಹದಾಯಿ, ಮಲಪ್ರಭಾ ನದಿ ಜೋಡಣೆಯ ವಿಚಾರ ಕೂಡ ಸದ್ಯಕ್ಕೆ ಸರ್ಕಾರದ ಮುಂದೆ ಇಲ್ಲ. ಇದು ಒಕ್ಕೂಟ ಸರ್ಕಾರವು ನನಗೆ ನೀಡಿರುವ ಉತ್ತರದಿಂದ ಸ್ಪಷ್ಟವಾಗಿದೆ' ಎಂದು ಪ್ರಜ್ವಲ್‌ ಹರಿಹಾಯ್ದಿದ್ದಾರೆ.

'ಮುಂದಿನ ದಿನಗಳಲ್ಲಿ ರಾಜ್ಯದ ಮೂರು ನೀರಾವರಿ ಯೋಜನೆಗಳಿಗೆ ಶೀಘ್ರವಾಗಿ ಅನುಮೋದನೆ ನೀಡುವಂತೆ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿ ಜೆಡಿಎಸ್‌ ಪಕ್ಷದಿಂದ ಹೋರಾಟಗಳನ್ನು ರೂಪಿಸಲಾಗುವುದು. ಈ ಹೋರಾಟಕ್ಕೆ ರಾಜ್ಯದ ಸಮಸ್ತ ಜನತೆ ಬೆಂಬಲವಾಗಿ ನಿಂತು ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಕೆಲಸ ನಿರ್ವಹಣೆ ಮಾಡಬೇಕು' ಎಂದು ಪ್ರಜ್ವಲ್‌ ರೇವಣ್ಣ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.