ಬೆಂಗಳೂರು: ‘ಮನೆಗೆಲಸದ ಮಧ್ಯವಯಸ್ಕ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ದುಷ್ಕೃತ್ಯಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಜೀವಾವಧಿ ಕಠಿಣ ಜೈಲು ಶಿಕ್ಷೆ ರದ್ದುಗೊಳಿಸುವಂತೆ ಕೋರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯಲ್ಲಿ ರಾಜ್ಯ ಸರ್ಕಾರ ವಿಶೇಷ ಪ್ರಾಸಿಕ್ಯೂಟರ್ ನೇಮಕ ಮಾಡಿದೆಯೇ ಇಲ್ಲವೇ ಎಂಬುದನ್ನು ವಿಶದಪಡಿಸಬೇಕು’ ಎಂದು ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.
ಈ ಸಂಬಂಧ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ಕೆ.ಎಸ್.ಮುದಗಲ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ನ್ಯಾಯಪೀಠ, ‘ಮೇಲ್ಮನವಿಯಲ್ಲಿ ವಾದ ಮಂಡಿಸಲು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ನೇಮಕ ಮಾಡಲಾಗಿದೆಯೇ ಇಲ್ಲವೇ ಎಂಬುದರ ಬಗ್ಗೆ ತಿಳಿಸಿ’ ಎಂದು ಸರ್ಕಾರದ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಇದೇ 28ಕ್ಕೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.