ADVERTISEMENT

ಭಗವದ್ಗೀತೆ ಪಠ್ಯದಲ್ಲಿ ಸೇರ್ಪಡೆಗೆ ವಿರೋಧ ಸಲ್ಲ: ಪ್ರಲ್ಹಾದ ಜೋಶಿ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2022, 22:06 IST
Last Updated 19 ಮಾರ್ಚ್ 2022, 22:06 IST

ಹುಬ್ಬಳ್ಳಿ: ‘ಭಗವದ್ಗೀತೆಯನ್ನು ಪಠ್ಯದಲ್ಲಿ ಸೇರ್ಪಡೆ ಮಾಡುವುದರಲ್ಲಿ ತಪ್ಪೇನು ಇಲ್ಲ. ಇದಕ್ಕೆ ಯಾರೂ ವಿರೋಧ ವ್ಯಕ್ತಪಡಿಸಬಾರದು’ ಎಂದುಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮನವಿ ಮಾಡಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ವಿಚಾರದಲ್ಲಿ ಜಾತಿವಾದಿಗಳು, ಹುಸಿ ಜಾತ್ಯತೀತವಾದಿಗಳು ವಾದ ಮಾಡಬಾರದು. ಎಲ್ಲರೂ ಈ ನಿರ್ಧಾರ ಸ್ವಾಗತಿಸಬೇಕು’ ಎಂದು ಅವರು ಹೇಳಿದರು.

‘ಸಮಾಜದಲ್ಲಿ ಈಚೆಗೆ ನೈತಿಕ ಶಿಕ್ಷಣ ಕಡಿಮೆ ಆಗುತ್ತಿದೆ. ನಮ್ಮ ಮಕ್ಕಳಿಗೆ ನೈತಿಕತೆ, ಇತಿಹಾಸ ಹಾಗೂ ಧರ್ಮದ ಬೋಧನೆ ಆಗಬೇಕಿದೆ. ಪಠ್ಯದಲ್ಲಿ ಭಗವದ್ಗೀತೆ ಸೇರಿಸುವುದರಿಂದ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ಲಭಿಸಲಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.