ನವದೆಹಲಿ: ಮಹದಾಯಿಗೆ ಸಂಬಂಧಪಟ್ಟಂತೆ ಗೋವಾ ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ನೀಡಿರುವ ಹೇಳಿಕೆ ಕೇಂದ್ರ ಸರ್ಕಾರದ ಹೇಳಿಕೆಯಲ್ಲ. ಅದು ಅವರ ವೈಯುಕ್ತಿಕ ಹೇಳಿಕೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
‘ಕೇಂದ್ರ ಅರಣ್ಯ ಸಚಿವರನ್ನು ಭೇಟಿ ಮಾಡಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನನ್ನನ್ನೂ ಭೇಟಿ ಮಾಡಿದ್ದರು. ಈ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಅಭಿವೃದ್ಧಿ ಕೆಲಸಕ್ಕೆ ಕೇಂದ್ರ ಸರ್ಕಾರದ ಸಹಕಾರ ಸಹ ಇರುತ್ತದೆ’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
‘ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಗದಗ, ಬಾಗಲಕೋಟೆ ಪ್ರದೇಶದ ಜನತೆಯ ಕುಡಿಯುವ ನೀರಿಗಾಗಿ 40 ಟಿಎಂಸಿ ನೀರನ್ನು ಬಳಸಿಕೊಳ್ಳುವ ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಸಿದ್ಧವಾಗಿದೆ. ಈ ವಿಚಾರದಲ್ಲಿ ನಾನೂ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಮನವರಿಕೆ ಮಾಡುತ್ತೇನೆ. ಕರ್ನಾಟಕದ ಹಿತಾಸಕ್ತಿ ಕಾಪಾಡುತ್ತೇವೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.