
ಪ್ರಜಾವಾಣಿ ವಾರ್ತೆ
ಪ್ರಲ್ಹಾದ ಜೋಶಿ
ಧಾರವಾಡ: ‘ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವುದಕ್ಕೆ ಸಂಬಂಧಿಸಿದ ಪ್ರಾಥಮಿಕ ವರದಿ ಗಮನಿಸಿದಾಗ ಕಿರಿಕಿರಿಯಾಗುತ್ತದೆ’ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜನಪ್ರತಿನಿಧಿಗಳು ಜನರ ಕೆಲಸ ಮಾಡಬೇಕು. ಬಹಳ ಎಚ್ಚರಿಕೆಯಿಂದ ಇರಬೇಕು. ಸಾರ್ವಜನಿಕ ಬದುಕಿನಲ್ಲಿ ಜನರಿಗೆ ಆದರ್ಶವಾಗಿರಬೇಕು’ ಎಂದರು.
‘ಚಂದ್ರು ಲಮಾಣಿ ಅವರ ವಿಚಾರಕ್ಕೆ ಸಂಬಂಧಿಸಿದಂತೆ ಪೂರ್ಣ ಮಾಹಿತಿ ಇಲ್ಲ. ಸಮಗ್ರ ಮಾಹಿತಿ ಪಡೆದ ನಂತರ ಮಾತನಾಡುತ್ತೇನೆ’ ಎಂದು ಉತ್ತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.