ADVERTISEMENT

ಹಿಂಬಡ್ತಿ ನೌಕರರ ಮರು ನಿಯುಕ್ತಿ

ಹುದ್ದೆ ಲಭ್ಯ ಇಲ್ಲದಿದ್ದರೆ ‘ಸೂಮರ್‌ ನ್ಯೂಮರರಿ’; ರಾಜ್ಯ ಸರ್ಕಾರ ಆದೇಶ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2019, 20:24 IST
Last Updated 27 ಫೆಬ್ರುವರಿ 2019, 20:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಸುಪ್ರೀಂ ಕೋರ್ಟ್‌ ತೀರ್ಪಿನ ಪರಿಣಾಮ ಹಿಂಬಡ್ತಿಗೆ ಒಳಗಾಗಿದ್ದ ಪರಿಶಿಷ್ಟ ಜಾತಿ (ಎಸ್‌.ಸಿ), ಪರಿಶಿಷ್ಟ ವರ್ಗದ (ಎಸ್‌.ಟಿ) 3,900 ನೌಕರರನ್ನು ಹಿಂಬಡ್ತಿ ಪೂರ್ವದಲ್ಲಿದ್ದ ಹುದ್ದೆಗೆ ಮರು ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಮರು ನಿಯುಕ್ತಿಗೊಳಿಸಲು ಹುದ್ದೆ ಖಾಲಿ ಇಲ್ಲದಿದ್ದರೆ ಸೂಮರ್‌ ನ್ಯೂಮರರಿ (ಸಂಖ್ಯಾಧಿಕ) ಹುದ್ದೆ ಸೃಜಿಸಬೇಕು. ಅದೇ ವೃಂದದಲ್ಲಿ ಸದ್ಯ ಕಾರ್ಯನಿರ್ವಹಿಸುತ್ತಿರುವ ಯಾವುದೇ ವರ್ಗಕ್ಕೆ ಸೇರಿದ ನೌಕರರಿಗೆ ಹಿಂಬಡ್ತಿ ನೀಡಬಾರದು ಎಂದೂ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT